ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಜಿಎಂಐಟಿಯ ವಿದ್ಯಾರ್ಥಿಗಳು ಆಯ್ಕೆ

ಸಂಜೆವಾಣಿ ವಾರ್ತೆ

ದಾವಣಗೆರೆ. ಡಿ.3; ಇತ್ತೀಚೆಗೆ ನಡೆದ ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಎಂಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಇಂಜಿನಿಯರಿಂಗ್ ಕಾಲೇಜಿನ ಮೆಕಾನಿಕಲ್ ವಿಭಾಗದ 7 ವಿದ್ಯಾರ್ಥಿಗಳು  ಮತ್ತು ಜಿಎಂಐಟಿ ಪಾಲಿಟೆಕ್ನಿಕ್ ಕಾಲೇಜಿನ 14 ವಿದ್ಯಾರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ತರಬೇತಿಯ ಮುಖಾಂತರ ಕೈಗಾರಿಕೆಗಳಿಗೆ ತಕ್ಕಂತೆ ತಯಾರು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮೆಕ್ಯಾನಿಕಲ್ ವಿದ್ಯಾರ್ಥಿಗಳಿಗೆ ಅನೇಕ ಉದ್ಯೋಗವಕಾಶಗಳು ಲಭ್ಯವಿದ್ದು, ದಿವಿಗಿ ಟ್ರಾನ್ಸ್ಮಿಷನ್ ಸಿಸ್ಟಮ್ಸ್, ಮಹಿಂದ್ರ ಸಿ ಐ ಇ, ಕಿರ್ಲೋಸ್ಕರ್ ಫೆರಸ್, ಟೊಯೋಟಾ ಆಟೋ ಪಾರ್ಟ್ಸ್ ತಮ್ಮ ಸಂದರ್ಶನ ಪ್ರಕ್ರಿಯೆಯನ್ನು ನಡೆಸಲಿವೆ ಎಂದು ಇದೆ ವೇಳೆ ತಿಳಿಸಿದರು. ಐವಾಯಂಟ್ ಟೆಕ್ನಾಲಜೀಸ್ ಕಂಪನಿಯು ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ  ವೈ ಯು ಸುಭಾಷ್ ಚಂದ್ರ, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ, ಜಿಎಂಐಟಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಡಾ ಬಿ ಆರ್ ಶ್ರೀಧರ್, ಇಂಜಿನಿಯರಿಂಗ್ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ ಶ್ರೀನಿವಾಸ್ ಸಿವಿ, ಪ್ಲೇಸ್ಮೆಂಟ್ ಸಂಯೋಜಕರಾದ ಪ್ರೊ ಪ್ರಶಾಂತ್,  ಡಿಪ್ಲೋಮೋ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರವೀಣ್, ಪ್ಲೇಸ್ಮೆಂಟ್ ಸಂಯೋಜಕರಾದ ಪ್ರೊ ಯಾಸ್ಮಿನ್, ವಿಭಾಗದ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.