ಕಿವೀಸ್ ವಿರುದ್ಧ ಟಿ-20 ಸರಣಿಗೆ ಭಾರತ ತಂಡ ಪ್ರಕಟ,ರೋಹಿತ್ ನಾಯಕ ರಾಹುಲ್ ಉಪನಾಯಕ

ನವದೆಹಲಿ, ನ.9 – ಈ ತಿಂಗಳ 17 ರಿಂದ ನ್ಯೂಜಿಲೆಂಡ್ ವಿರುದ್ದ ಆರಂಭವಾಗಲಿರುವ ಟಿ-20 ಕ್ರಿಕೆಟ್ ಸರಣಿಗೆ ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡವನ್ನು ಇಂದು ಪ್ರಕಟಿಸಲಾಗಿದೆ.
ನಾಯಕನ ಸ್ಥಾನದಿಂದ ಕೆಳಗಿಳಿದಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಕರ್ನಾಟಕದ ಲೋಕೇಶ್ ರಾಹುಲ್ ಗೆ ಉಪನಾಯಕನ ಪಟ್ಟ ನೀಡಲಾಗಿದೆ.
ವೇಗದ ಬೌಲರ್ ಗಳಾದ ಜಸ್ಪ್ರೀತ್ ಬುಮ್ರಾ, ಮೊಹ್ಮದ್ ಶಮಿ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಅವರಿಗೂ ವಿಶ್ರಾಂತಿ ನೀಡಲಾಗಿದೆ.
ಈ ಬಾರಿಯ ಟಿ-20 ವಿಶ್ವಕಪ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಈ ಬಾರಿಯ ಐಪಿಎಲ್ ನಲ್ಲಿ ಹೆಚ್ಚು ರನ್ ಗಳಿಸಿದ ಋತುರಾಜ್ ರಾಜ್ ಗಾಯಕ್ವಾಡ್, ಅದೇ ರೀತಿ ಹೆಚ್ಚು ವಿಕೆಟ್ ಪಡೆದ ಹರ್ಷಲ್ ಪಟೇಲ್ ಹಾಗೂ ವೆಂಕಟೇಶ್ ಅಯ್ಯರ್ ಅವಕಾಶ ಕಲ್ಪಿಸಲಾಗಿದೆ.
ಹಿರಿಯ ಆಟಗಾರ ಯಜುವೇಂದ್ರ ಚಹಲ್, ಮೊಹ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ ,ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಹಲ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಆವೇಶ್ ಖಾನ್,ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಮೊಹ್ಮದ್ ಸಿರಾಜ್.