ಕುಂಕುವ ಗ್ರಾಮದಲ್ಲಿ ಜಲಾವೃತಗೊಂಡ ಜಮೀನುಗಳು

ಹೊನ್ನಾಳಿ.ನ.೨೩;   ಅವಳಿ ತಾಲೂಕಿನಾಧ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು..ದೂರವಾಣಿ ಮೂಲಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅನಾರೋಗ್ಯದಿಂದ ನಾನು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆದಿರುವುದಾಗಿ ತಿಳಿಸಿದರು.ಅವಳಿ ತಾಲೂಕಿನಾಧ್ಯಂತ 300 ಹೆಕ್ಟೇರ್ ಭತ್ತ,ಮೆಕ್ಕೆಜೋಳ ಬೆಳೆಗಳಿಗೆ ಹಾನಿಯಾಗಿದ್ದರೇ, 169 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಹಾನಿಯಾಗಿದೆ ಎಂದರು.ಇನ್ನು ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ 83 ಮನೆಗಳಿಗೆ ಹಾನಿಯಾಗಿದೇ ಎಂದು ಮಾಹಿತಿ ನೀಡಿದರು.ಈಗಾಗಲೇ ಅವಳಿ ತಾಲೂಕಿನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದು ಹಾನಿಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಜಂಟಿ ಸರ್ವೇ ಮಾಡುವಂತೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಅಧಿಕಾರಿಗಳಿAದ ವರದಿ ಬಂದ ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹಾರ ಕೊಡಿಸುವುದಾಗಿ ತಿಳಿಸಿದರು..ಅವಳಿ ತಾಲೂಕಿನಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ರಸ್ತೆ, ಸೇತುವೆಗಳಿಗೂ ಹಾನಿಯಾಗಿದ್ದು ಈ ಬಗ್ಗೆ ವರದಿ ನೀಡುವಂತೆ ಸಂಬAದ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಮಳೆಯಿAದಾಗಿ ಕೆರೆಕಟ್ಟೆಗಳು ತುಂಬಿ ಹರಿಯುತ್ತಿದ್ದು ಜನರು ಓಡಾಡುವಾಗ ಜಾಗರೂಕತೆಯಿಂದ ಇರುವಂತೆ ರೇಣುಕಾಚಾರ್ಯ ಇದೇ ವೇಳೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ..