ಕುಂಬಳಗೋಡಲ್ಲಿ ಸ್ವತಂತ್ರ ದಿನಾಚರಣೆ

ಕೆಂಗೇರಿ,ಆ.೧೫- ಕುಂಬಳಗೋಡು ಗ್ರಾಮ ಪಂಚಾಯಿತಿಯ ಕಛೇರಿಯಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಣ್ಣಿನ ಮಗ ರಾಮಕೃಷ್ಣ ಮತ್ತು ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಮಾತನಾಡಿ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ತಮ್ಮ ಪ್ರಾಣ ತ್ಯಾಗವನ್ನು ಮಾಡಿ ನಮಗೆಲ್ಲ ಸ್ವಾತಂತ್ರ್ಯ ಲಭಿಸುವಂತೆ ಮಾಡಿದ್ದಾರೆ. ಇಂದು ಅವರನ್ನು ನೆನೆಸಿಕೊಂಡು ಅವರ ಮಾರ್ಗದರ್ಶನದಲ್ಲಿ ಹಾಗೂ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಿಕ್ಕ ರಾಜು, ಗ್ರಾಮ ಪಂಚಾಯತಿ ಸದಸ್ಯರುಗಳಾದ ದೇವರಾಜು, ನರಸಿಂಹಮೂರ್ತಿ, ಲೋಕೇಶ್, ವೆಂಕಟೇಗೌಡ, ವಿಜಯಲಕ್ಷ್ಮಿ ಧರ್ಮಯ್ಯ, ಮಹಮ್ಮದ್ ಅನೀಸ್, ನರಸಮ್ಮ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.