ಕುಂಬಾರ ಅಭಿವೃದ್ಧಿ ನಿಗಮಕ್ಕೆ ಪ್ರಭು ಬೆಣ್ಣೂರ ನೇಮಕಕ್ಕೆ ಆಗ್ರಹ

ಅಫಜಲಪುರ:ಆ.18: ರಾಜ್ಯ ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಚಿತ್ತಾಪುರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪ್ರಭು ಕುಂಬಾರ ಬೆಣ್ಣೂರ ಅವರಿಗೆ ನೇಮಕ ಮಾಡಿ ಎಂದು ಪಕ್ಷದ ವರಿಷ್ಠರಿಗೆ ತಾಲೂಕು ಕುಂಬಾರ ಸಮಾಜದ ಅಧ್ಯಕ್ಷ ಶರಣು ಕುಂಬಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 35 ವರ್ಷಗಳಿಂದ ನಿರಂತರವಾಗಿ ಚಿತ್ತಾಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಇವರು ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಅಲ್ಲದೇ ಚಿತ್ತಾಪುರ ಮತಕ್ಷೇತ್ರ ಮಾತ್ರವಲ್ಲದೆ ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳಲ್ಲೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಮತಯಾಚನೆ ಮಾಡಿದ್ದಾರೆ. ಹೀಗಾಗಿ ಸಾಮಾನ್ಯ ಕಾರ್ಯಕರ್ತರಾಗಿರುವ ಇವರನ್ನು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುತಿಸಿ ಇವರನ್ನು ಕುಂಬಾರ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.