ಕುಕನೂರು ಪತ್ರಕರ್ತರಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಕುಕನೂರು, ಜೂ.5- ಕೊರೊನಾ ವಾರಿಯರ್ಸ್ ಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಣಾ ಕಾರ್ಯಕ್ರಮ ಮಂಗಳವಾರ ಇಲ್ಲಿಯ ಎಪಿಎಂಸಿ ಮೈದಾನದಲ್ಲಿ ನಡೆಯಿತು. ಉದ್ಯಮಿ ಶರಣಪ್ಪ ಮಂಡಲಗಿರಿ ಅವರು ಪತ್ರಕರ್ತರಿಗೆ ಕಿಟ್ ವಿತರಿಸಿ ಮಾತನಾಡಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರು ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ ಇವರು ಸುದ್ದಿಗಳನ್ನು ಪ್ರಸಾರ ಮಾಡುವ ಜೊತೆಗೆ ಕರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಮನೆಯಲ್ಲಿ ಸುರಕ್ಷಿತವಾಗಿದ್ದುಕೊಂಡು ಅಂತರ ಕಾಪಾಡಬೇಕೆಂದು ನುಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಶರಣಪ್ಪ ರಡ್ಡೇರ್, ಶರಣಪ್ಪ , ಹಿರಿಯ ಪತ್ರಕರ್ತ ಕೊಟ್ರಪ್ಪ ತೋಟದ, ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರುದ್ರಪ್ಪ ಭಂಡಾರಿ,
ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಮುರಾರಿ ಭಜಂತ್ರಿ, ರೈತ ಸಂಘದ ಕಾರ್ಯದರ್ಶಿ ಬಸವರಾಜ ಕೊಡ್ಲಿ ಸೇರಿದಂತೆ ಅನೇಕರು ಹಾಜರಿದ್ದರು.ಪತ್ರಕರ್ತ ಅಮರೇಶ ಕಂದಗಲ್ ನಿರೂಪಿಸಿದರು.