
ದಕ್ಷಿಣ ಕನ್ನಡ,ಏ.೧೦- ಜಿಲ್ಲೆಯ ಕಡಬ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ದಂಪತಿ ಭೇಟಿ ನೀಡಿದರು. ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ತಾರಾ ಜೋಡಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ವಸಿಷ್ಠ ಸಿಂಹ ಅವರು ಅಕ್ಕನ ಹರಕೆಯಂತೆ ತುಲಾಭಾರ ಸೇವೆ ಸಲ್ಲಿಸಿದರು. ನಂತರ ಶ್ರೀ ಹೊಸಳಿಗಮ್ಮನ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ವಸಿಷ್ಠ ಸಿಂಹ ದಂಪತಿಯನ್ನು ಗೌರವಿಸಲಾಯಿತು. ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಶೋಭಾ ಗಿರಿಧರ್, ವನಜಾ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಸ್ಯಾಂಡಲ್‌ವುಡ್ ಲವ್ ಬರ್ಡ್ಸ್‌ಗಳಾಗಿ ಗುರುತಿಸಿಕೊಂಡ ಬಹುಬೇಡಿಕೆ ತಾರಾ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯ ಜನವರಿ ೨೬ ರಂದು ಹಸೆಮಣೆ ಏರಿದ್ದರು.
ಫೋಟೋ- ವಸಿಷ್ಟ