ಕುಖ್ಯಾತ ಬೈಕ್ ಕಳ್ಳನ ಸೆರೆ

ಬೆಂಗಳೂರು,ಏ.೬-ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ೩ ಲಕ್ಷ ೯ ಸಾವಿರ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಚಾಮರಾಜಪೇಟೆಯ ಟಿಪ್ಪುನಗರ,ಸಲೀಂ, (೨೮) ಬಂಧಿತ ಆರೋಪಿಯಾಗಿದ್ದಾನೆ.
ಬಂಧಿತನಿಂದ ೩ ಲಕ್ಷ ೯ ಸಾವಿರ ಮೌಲ್ಯದ ೫ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕಳೆದ ಏ.೪ ರಂದು ಕಾಮಾಕ್ಷಿಪಾಳ್ಯದ ಕೊಟ್ಟಿಗೇಪಾಳ್ಯದ ಬಳಿ ವಾಹನ ತಪಾಸಣೆ ವೇಳೆ ಹೊಂಡಾ ಆಕ್ಟೀವಾದಲ್ಲಿ ಶಂಕಾಸ್ಪದವಾಗಿ ಬಂದ ಆರೋಪಿ ಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನ ಕಳವು ಕೃತ್ಯವನ್ನು ಬಾಯ್ಬಿಟ್ಟಿದ್ದಾನೆ.
ಆರೋಪಿ ಯನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಶಾಂತ್ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿ ಕಾಟನ್‌ಪೇಟೆ, ವಿಜಯನಗರ ಹಾಗೂ ಬೊಮ್ಮನಹಳ್ಳಿ ಪೊಲೀಸ್ ಠಾಣೆಗಳಲ್ಲಿ ನಡೆದಿದ್ದ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.