ಕುಖ್ಯಾತ ರೌಡಿ ಚೈಲ್ಡ್ ರವಿ ಕೊಚ್ಚಿ ಕೊಲೆ

ಹಾಸನ,ಜೂ.೫-ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿಯನ್ನು ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ದುರ್ಘಟನೆ ಹೇಮಾವತಿನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಹೇಮಾವತಿನಗರದ ಬಳಿ ರೌಡಿ ರವಿ (೪೭) ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ
ದಾಳಿ ನಡೆದ ಸ್ಥಳದಲ್ಲೇ ತೀವ್ರ ರಕ್ತ ಸ್ರಾವದಿಂದಾಗಿ ರವಿ ಸಾವನ್ನಪ್ಪಿದ್ದಾನೆ. ಕೊಲೆಯಾದ ರವಿಯ ವಿರುದ್ಧ ಕೊಲೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿದ್ದವು.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಪೆನ್‌ಷನ್ ಮೊಹಲ್ಲಾ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ತಲ್ವಾರ್‌ನಿಂದ ಹಲ್ಲೆ:
ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಲಾಗಿದೆ. ಸುರಪುರದಲ್ಲಿ ಉಪಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ರಾಜುಗೌಡ ಅಳಿಯನ ಕಾರಿನ ಮೇಲೆ ಕೈ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿದೆ