ಕುಖ್ಯಾತ ವಾಹನ ಕಳ್ಳನ ಸೆರೆ

ಬೆಂಗಳೂರು,ಮಾ.೨೯-ಲಾಕ್ ಮುರಿದು ಇಲ್ಲವೇ ನಕಲಿ ಕೀ ಬಳಸಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ವಾಹನ ಕಳ್ಳನನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ೮ ಲಕ್ಷ ೧೫ ಸಾವಿರ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಮಾಕ್ಷಿಪಾಳ್ಯದ ಕಾವೇರಿಪುರದ ಅನಿಲ್ ಕುಮಾರ್(೨೪) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ ೮ ಲಕ್ಷ೧೫ ಸಾವಿರ ಮೌಲ್ಯದ ೬ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಕಳೆದ ಮಾ.೨೧ ರಂದು ರಾತ್ರಿ ಬುಲೆಟ್ ಬೈಕ್ ಕಳವು ಮಾಡಿದ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಶಾಂತ್ ಮತ್ತವರ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯ ಬಂಧನದಿಂದ ಕಾಮಾಕ್ಷಿಪಾಳ್ಯ೩, ಹೆಬ್ಬಗೋಡಿ, ಜ್ಞಾನಭಾರತಿ,ಅನ್ನಪೂರ್ಣೇಶ್ವರಿನಗರ ತಲಾ ೧ಸೇರಿ ೬ ದ್ವಿಚಕ್ರ ವಾಹನಗಳ ಕಳವು ಪ್ರಕರಣ ಪತ್ತೆಯಾಗಿವೆ ಎಂದರು.