
ಕಲಬುರಗಿ,ಫೆ 24: ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣದಿಂದ ಪತ್ನಿಯನ್ನು ಪತಿ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ದಾರುಣ ಘಟನೆ ಕಾಳಗಿ ತಾಲೂಕಿನ ತೆಂಗಳಿ ಗ್ರಾಮದಲ್ಲಿ ನಡೆದಿದೆ.
ಈರಮ್ಮ ಶಿವಯ್ಯ ಮಠಪತಿ ( 37) ಕೊಲೆಯಾದ ಮಹಿಳೆ.ಆಕೆಯ ಪತಿ ಶಿವಯ್ಯ ಮಠಪತಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕಾಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ