ಕುಡಿಯುವನೀರು ಶುದ್ಧೀಕರಣ ಘಟಕ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ

ಕಲಬುರಗಿ,ಜೂ. 30: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಇಂದು ಹುಮನಾಬಾದ ರಸ್ತೆಯ ತಾವರಗೇರಾ ಕ್ರಾಸ್ ಬಳಿ ಇರುವ ಸಲಾಂ ಟೇಕಡಿ ಪ್ರದೇಶದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ನಂತರ ಹರಸೂರ ಗ್ರಾಮದಲ್ಲಿರುವ ಬೆಣ್ಣೆತೋರಾ ಜಲಾಶಯಕ್ಕೆ ಭೇಟಿ ನೀಡಿದ ಡಿ.ಸಿ. ಅವರು, ಜಲಾಶಯದಿಂದ ಕಲಬುರಗಿ ನಗರಕ್ಕೆ ನೀರು ಪೂರೈಸುವ ನೀರೆತ್ತುವ (ಇನ್ ಟೇಕ್ ಮತ್ತು ಜಾಕವೆಲ್ ) ಕಾಮಗಾತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದಕ್ಕೂ ಮುನ್ನ ಕಲಬುರಗಿ ನಗರದ ಫಿಲ್ಟರ್ ಬೆಡ್, ಬಸವೇಶ್ವರ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸರಬರಾಜು ಸ್ಥಳಕ್ಕೂ ಬೇಟಿ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇ.ಇ. ಕಾಂತರಾಜು ಇದ್ದರು.