ತಲೆದೋರಿದ್ದು, ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಯಾವುದೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಅಥಣಿ ಪಟ್ಟಣದಲ್ಲಿಂದು ಬರಗಾಲ ಮತ್ತು ಪ್ರವಾಹ ನಿರ್ವಹಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅವರು ಮುಂದೆ ಮಾತನಾಡುತ್ತಾ
ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪಿಡಿಓ ಗಳು ತಾತ್ಕಾಲಿಕ ಟ್ಯಾಂಕರ್ ವ್ಯವಸ್ಥೆ ಮಾಡಿ ನೀರು ಪೂರೈಸಬೇಕು. ಅಗತ್ಯವಿದ್ದಲ್ಲಿ ಕೊಳವೆಬಾವಿಗಳನ್ನು ದುರಸ್ತಿ ಮಾಡಿಕೊಂಡು ಕ್ರಮ ಕೈಕೊಳ್ಳಬೇಕು. ಕುಡಿಯುವ ನೀರಿನ ನಿರ್ವಹಣೆಗೆ ಅನುದಾನದ ಯಾವುದೇ ಕೊರತೆ ಇಲ್ಲ, ನಿರ್ವಹಣೆಗಾಗಿ ಸರ್ಕಾರದಿಂದ ಪ್ರತಿ ತಾಲೂಕಿಗೆ 15 ರಿಂದ 20 ಲಕ್ಷ ರೂ. ಅನುದಾನ ಬರಲಿದೆ. ಒಟ್ಟಾರೆ ಮಳೆಗಾಲ ಪ್ರಾರಂಭವಾಗುವವರೆಗೆ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆ ತೋರದಂತೆ ಹೆಚ್ಚಿನ ನಿಗಾ ವಹಿಸಬೇಕೆಂದು ಸೂಚಿಸಿದರು.
ಬಿತ್ತನೆ ಬೀಜ ಮತ್ತು ಗೊಬ್ಬರ ದಾಸ್ತಾನು ಮಾಹಿತಿ ಪ್ರಕಟಿಸಿ :-
ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ಬೇಕಾಗುವ ಬಿತ್ತನೆ ಬೀಜ ಮತ್ತು ಗೊಬ್ಬರದ ದಾಸ್ತಾನು ಬಗ್ಗೆ ಮಾಹಿತಿ ಪ್ರಕಟಿಸಬೇಕು. ಬೀಜ ಮತ್ತು ಗೊಬ್ಬರ ತೆಗೆದುಕೊಂಡು ಹೋಗಲು ಬರುವ ರೈತರಿಗೆ ಬೇಕಾಗಿರುವ ಬೀಜ ಮತ್ತು ಗೊಬ್ಬರ ಮಾತ್ರ ನೀಡಬೇಕು. ಪ್ರತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ವ್ಯಾಪಾರಸ್ಥರ ಮೇಲು ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ;-
ಕಟ್ಟಡಗಳ ಜಾಗ ಒದಗಿಸುವುದು, ಆಶ್ರಯ ಮನೆಗಳ ಜಿಪಿಎಸ್ ಮಾಡಿಸುವುದು, ನಾಡಕಚೇರಿಗಳಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು ಮುಂಬರುವ ದಿನಗಳಲ್ಲಿ ‘ಆರ್‍ಟಿಸಿ ತಿದ್ದುಪಡಿ ಸೇರಿದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಹಾನಿ ತಕ್ಷಣ ಸಮೀಕ್ಷೆಯಾಗಬೇಕು :-
ಅಥಣಿ ತಾಲೂಕಿನಲ್ಲಿ ಇತ್ತೀಚಿಗೆ ಆಗಿರುವ ಅಕಾಲಿಕ ಮಳೆ ಹಾಗೂ ಗಾಳಿಯಿಂದ ಅನೇಕ ರೈತರ ದ್ರಾಕ್ಷಿ ಬೆಳೆಗಳು ಹಾನಿಯಾಗಿವೆ. ಈ ಬೆಳೆ ಹಾನಿ ಕುರಿತು ವರದಿ ಬಂದ ಕೂಡಲೇ ತೋಟಗಾರಿಕಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ 24 ಗಂಟೆಯ ಒಳಗಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು. ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ತಕ್ಷಣ ರೈತರಿಗೆ ತಲುಪಿಸುವ ಬಗ್ಗೆ ಕಾರ್ಯಪ್ರವೃತ್ತರಾಗಿ ಎಂದರು,
ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ :-
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ್ ಮಾತನಾಡಿ ಅಥಣಿ ಮತ್ತು ಕಾಗವಾಡ ತಾಲೂಕಿನ ಇಬ್ಬರು ತಹಸೀಲ್ದಾರರು ತಮ್ಮ ವ್ಯಾಪ್ತಿಯ ಅಧಿಕಾರಿಗಳ ಸಭೆ ನಡೆಸುವ ಮೂಲಕ ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಾಧ್ಯವಾದರೆ ಕಂಟ್ರೋಲ್ ರೂಂ ಸ್ಥಾಪಿಸಬೇಕು. ತುರ್ತುಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳು ಗುರುತಿನ ಪತ್ರಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ತುರ್ತು ಸಂದರ್ಭದಲ್ಲಿ 112 ಕರೆ ಮಾಡುವ ಮೂಲಕ ಪೆÇಲೀಸ್ ಇಲಾಖೆಯ ಸೇವೆಯನ್ನು ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಅಥಣಿ ತಹಸೀಲ್ದಾರ ಬಿ ಎಸ್ ಕಡಕಬಾವಿ, ಕಾಗವಾಡ ತಹಶೀಲ್ದಾರ ಎಂ ಎನ್ ಬಳೆಗಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಸೇರಿದಂತೆ ಕಾಗವಾಡ ಮತ್ತು ಅಥಣಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಡಿಲಿನ ಬಗ್ಗೆ ಜಾಗೃತಿ ಮೂಡಿಸಿ:
ಮುಂಗಾರು ಮಳೆ ಆರಂಭವಾಗುವ ಈ ದಿನಗಳಲ್ಲಿ ಗುಡುಗು ಸಿಡಿಲಿಗೆ ಜನರು ಮತ್ತು ಜಾನುವಾರುಗಳು ಬಲಿಯಾಗಿವೆ. ಅಥಣಿ ತಾಲೂಕಿನಲ್ಲಿ ಎರಡು ಘಟನೆಗಳಾಗಿದ್ದು, ಅಧಿಕಾರಿಗಳು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಿದೆ. ಏಕೆಂದರೆ ಜನರು ಮತ್ತು ರೈತರು ಮಳೆ ಗಾಳಿ ಬಂದಾಗ ಗಿಡಗಳನ್ನೇ ಆಶ್ರಯ ಪಡೆಯುತ್ತಾರೆ. ಸಿಡಿಲು ಗಿಡಗಳಿಗೆ ಹೊಡೆಯುವ ಸಾಧ್ಯತೆ ಅಧಿಕವಾಗಿರುತ್ತದೆ. ಆದ್ದರಿಂ ದ ಗಿಡಗಳ ಹತ್ತಿರ ಯಾರು ನಿಲ್ಲದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.