ಕುಡಿಯುವ ನೀರಿನ ಘಟಕ ನಿರ್ವಹಣೆ ಪ್ರಾತ್ಯಕ್ಷಿಕೆ

ಬೆಳಗಾವಿ,ಏ11: ಬೇಸಿಗೆಕಾಲದಲ್ಲಿ ಎದುರಾಗುವ ಸಂಭವನೀಯ ಶುದ್ದ ಕುಡಿಯುವ ನೀರಿನ ಸಮಸ್ಯೆಯ ನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಹಾಗೂ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ತಾಪಂ ವತಿಯಿಂದ ಶುದ್ಧ ಕುಡಿಯುವ ನೀರಿನ ನಿರ್ವಹಣೆ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ಕಿತ್ತೂರು ತಾಲೂಕಿನ ದೇಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸರಕೋಡ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ್ಕೆ ಭೇಟಿ ನೀಡಿದ ತಾಪಂ ಇಒ ಸುಭಾಷ ಸಂಪಗಾವಿ ಅವರು, ಪಿಲ್ಟರ್ ಸ್ವಚ್ಛತೆ ಕಾಪಾಡುವುದರ ಅಗತ್ಯತೆ ಹಾಗೂ ಅದರ ಮಹತ್ವವನ್ನು ತಿಳಿಸಿಕೊಟ್ಟರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪಿಡಿಓ ಗಳಿಗೆ ನೀರು ಫಿಲ್ಟರ್ ಮಷಿನ್ ನಿರ್ವಹಣೆ ಬಗ್ಗೆ ತರಬೇತಿ ನೀಡಲಾಯಿತು.

ತಹಸೀಲ್ದಾರ್ ರವೀಂದ್ರ ಹಾದಿಮನಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬೈಲಹೊಂಗಲ ಉಪವಿಭಾಗದ ಸಹಾಯಕ ಕಾರ್ಯಕಾರಿ ಅಭಿಯಂತರ ಎಸ್.ಕೆ. ಮುಕಸಜ್ಜಿ, ಕಿತ್ತೂರ ಹೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಕೆ.ಹಿರೇಮಠ, ಸಹಾಯಕ ನಿರ್ದೇಶಕರಾದ ಸುರೇಶ ನಾಗೋಜಿ, ಲಿಂಗರಾಜ ಹಲಕರ್ಣಿಮಠ ಇದ್ದರು.