ಕುಡಿಯುವ ನೀರಿನ ಸಮಸ್ಯೆಗೆ ಕ್ರಮ

ಕೆ.ಆರ್.ಪುರ,ಏ.೩- ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗದಂತೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ತಿಳಿಸಿದರು.
ಕೆ.ಆರ್.ಪುರ ಕ್ಷೇತ್ರದ ಕಲ್ಕೆರೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಾಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಬೇಸಿಗೆಯಲ್ಲಿ ನೀರಿನ ಅವಶ್ಯಕತೆ ಹೆಚ್ಚಾಗಿದ್ದು ಅದಕ್ಕೆ ಸರ್ಮಪಕವಾಗಿ ನಿರ್ವಹಣೆ ಮಾಡುವ ಮೂಲಕ ಅಗತ್ಯಗಳನ್ನು ಪೂರೈಸಲು ಸೂಚಿಸಿದರು.
ಸಾರ್ವಜನಿಕರ ತೆರಿಗೆ ಹಣಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಪಾಲಿಕೆ ತಿಳಿಸಿದರು.
ಕ್ಷೇತ್ರದ ವಿವಿಧೆಡೆ ಅಭಿವೃದ್ಧಿ ಕಾಮಾಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಗುಣಮಟ್ಟದ ಕಾಯ್ದುಕೊಳ್ಳುವಂತೆ ಸೂಚಿಸಿದರು.
ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿದ್ದು,ಹಂತ ಹಂತವಾಗಿ ಜಾರಿಗೊಳಿಸುವುದಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾದ ಮಾದೇಶಣ್ಣ,ಎಇ ಗುರು,ಎಇಇ ರಮೇಶ್, ಮುಖಂಡರಾದ ಶಾಂತ ಕೃಷ್ಣಮೂರ್ತಿ,ಕಲ್ಕೆರೆ ಅನೀಲ್, ಇದ್ದರು

ಸುದ್ದಿಚಿತ್ರ:ಕೆ.ಆರ್.ಪುರ ಕ್ಷೇತ್ರದ ಕಲ್ಕೆರೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಾಗಾರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಚಾಲನೆ ನೀಡಿದರು.