ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳ ಭೇಟಿ

ಗದಗ,ಮೇ28 : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಗೆ ಗದಗ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್ ರಾವ್ ಪಾಟೀಲ್ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರಿಂದ ಮಾಹಿತಿ ಪಡೆದ ಅವರು ಪ್ರಸ್ತುತ ಕುಡಿಯುವ ನೀರನ್ನು ಪರೀಕ್ಷೆ ಮಾಡಿಯೇ ಎರೇ ಹಂಚಿನಾಳ ಗ್ರಾಮದಿಂದ ಟ್ಯಾಂಕರಗಳ ಮೂಲಕ ಸರಬರಾಜು ಮಾಡಲಾಗುತ್ತಿದ್ದು ಗ್ರಾಮದಲ್ಲಿ ನೀರಿನ ಹೆಚ್ಚಿನ ಬೇಡಿಕೆ ಇದ್ದಲ್ಲಿ ಹೆಚ್ಚಿನ ಟ್ಯಾಂಕರಗಳ ಮೂಲಕ ಒದಗಿಸಲು ಖWS ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವರಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ನಿರ್ದೇಶಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.