ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ:ತಾ.ಪಂ ಕಾ ನಿರ್ವಾಹಕ ಅಧಿಕಾರಿ ವೀರಣ್ಣ ಕವಲಗಿ

ಕರಜಗಿ:ಮಾ.12:ಅಫಜಲಪುರ ತಾಲೂಕನ್ನು ಬರ ಪೀಡಿತ ತಾಲೂಕು ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಸದ್ಯ ಬೇಸಿಗೆಕಾಲ ಪ್ರಾರಂಭವಾಗಿರುವುದರಿಂದ ಭೀಮಾ ನದಿಯಲ್ಲಿ ನೀರಿನ ಮಟ್ಟ ಬಹಳಷ್ಟು ಕಡಿಮೆಯಾಗಿದೆ.ಅಂತರ್ಜಲದ ಮಟ್ಟ ಕೂಡ ಬಹಳಷ್ಟು ಕುಸಿದಿದೆ.ಆದ್ದರಿಂದ ಲಭ್ಯವಿರುವ ಜಲಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವುದು ಬಹಳ ಮುಖ್ಯವಾಗಿದೆ.ಎಂದು ಅಫಜಲಪುರ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ಕವಲಗಿ ಹೇಳಿದರು.
ಅವರು ತಾಲೂಕಿನಲ್ಲಿ ಬರುವ 28 ಗ್ರಾಮ ಪಂಚಾಯತಿಗಳಿಗೆ ಭೇಟಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರ ಜೊತೆ ಸಭೆ ನಡೆಸಿ ಮಾತನಾಡಿ ಅಫಜಲಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಗ್ರಾಪಂ ಹಂತದಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
ಬೇಸಿಗೆಯಲ್ಲಿ ಅಫಜಲಪುರ,ತಾಲೂಕು ಪಂಚಾಯತ ವ್ಯಾಪ್ತಿಯಲ್ಲಿ ಬರುವ ಯಾವುದೇ ಗ್ರಾಮ ಪಂಚಾಯತಿಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು.ನೀರಿನ ಸಮಸ್ಯೆಯಾಗುವ ಗ್ರಾಮಗಳು, ಪರ್ಯಾಯವಾಗಿ ಹತ್ತಿರದಲ್ಲಿರುವ ಖಾಸಗಿಯವರ ಕೊಳವೆ ಬಾವಿಗಳ (ಬೋರ ವೆಲ್) ಗಳ ಮಾಹಿತಿ ಸಂಗ್ರಹಿಸಬೇಕು.ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು.ಪಿಡಿಓಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರಬೇಕು. ತಮ್ಮ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಿಗೆ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಬೇಕು.ಅನುದಾನದ ನೆಪ, ಅಭಿವದ್ಧಿ ಮೂಲಭೂತ ಸೌಲಭ್ಯಗಳ ಬಗ್ಗೆ ನೆಪ ಹೇಳಿದರೆ ನಡೆಯುವುದಿಲ್ಲ.ಯಾವುದೇ ಸಮಸ್ಯೆಗಳಿದ್ದರೆ ತಕ್ಷಣ ನನ್ನ ಗಮನಕ್ಕೆ ತರಬೇಕು ಎಂದು ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.ಕುಡಿಯುವ ನೀರಿನ ಸಲುವಾಗಿ.ಹೊಸ ಟಾಸ್ಕ್ ಪೆÇೀರ್ಸ್ ರಚಿಸುವಂತೆ ಸರ್ಕಾರ ಆದೇಶಿಸಿದೆ. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಮಾತ್ರ ಕೊಳವೆಬಾವಿ ಕೊರೆಯಿಸಬೇಕು.
ಕುಡಿಯುವ ನೀರಿನ ಸಲುವಾಗಿ ಹೆಚ್ಚಿನ ಮಾಹಿತಿಗಾಗಿ ತಾಲೂಕು ಪಂಚಾಯತ ಸಹಾಯವಾಣಿ ಸಂಖ್ಯೆ +919448140594 ಈ ನಂಬರ್ ಗೆ ಸಂಪರ್ಕಿಸಬಹುದು ಎಂದು ಹೇಳಿದರು
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ರಮೇಶ ಪಾಟೀಲ ಸೇರಿದಂತೆ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರು ಮತ್ತು ಸದಸ್ಯರಿದ್ದರು.
.