ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮಕ್ಕೆ ಸೂಚನೆ

ಧಾರವಾಡ, ಅ.12: ರೇಣುಕಾ ಜಲಾಶಯ ಹಾಗೂ ನೀರಸಾಗರದಿಂದ ಜಿಲ್ಲೆಗೆ ಅವಶ್ಯಕವಾಗಿ ಬೇಕಾಗಿರುವ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಕೆರೆಗಳನ್ನು ತುಂಬಿಸಲಾಗಿದೆ. ಕೆಲವು ಕಡೆಗಳಲ್ಲಿ ಬೋರವೆಲ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮವಹಿಸಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಸಭೆಗೆ ಬರುವ ಮುನ್ನ ಇಲಾಖೆಯ ಅಧಿಕಾರಿಗಳು ಎಲ್ಲಾ ಕಾರ್ಯಕ್ರಮಗಳ ವರದಿಗಳನ್ನು ಅಂಕಿ ಅಂಶಗಳನ್ನು ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದರು.

ಹುಬ್ಬಳ್ಳಿ ಪ್ಲೈ ಓವರ್ ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸಬೇಕು. ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಕಾರ್ಯೋನ್ಮುಖರಾಗಬೇಕು. ಕೆಲವು ಕಡೆಗಳಲ್ಲಿ ಹೊಲಗಳಿಗೆ ಹೋಗಲು ಸಹ ಯಾವುದೇ ದಾರಿ ಇರುವುದಿಲ್ಲ. ಹೀಗಾಗಿ ರೈತರು ಹೊಲಗಳಿಗೆ ತೆರಳಲು ಹೋಗುವಂತೆ ದಾರಿಗಳನ್ನು ನಿರ್ಮಿಸಬೇಕಿದೆ. ರೇμÉ್ಮ, ತೋಟಗಾರಿಕೆ, ವಾಣಿಜ್ಯ ಹಾಗೂ ಪ್ರಮುಖ ಆಹಾರ ಬೆಳೆಗಳ ಕುರಿತು ಬೆಳೆಯುವಂತೆ ರೈತರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಲ್ಲದೇ ಈ ಭಾಗದಲ್ಲಿ ನವಲೂರು ಪೇರಲ್, ಧಾರವಾಡದ ಆಫೆÇೀಸ್ ಮಾವು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವಂತೆ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಸರ್ಕಾರದ ಯೋಜನೆ ಹಾಗೂ ಸಹಾಯಧನದ ಕುರಿತು ಮಾಹಿತಿ ನೀಡಬೇಕಿದೆ ಎಂದು ತಿಳಿಸಿದರು.

ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಟ್ಟು, ಪೆÇೀಷಿಸಬೇಕು. ಪಶು ಸಂಜೀವಿನಿ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕಿದೆ. ಇದರಿಂದ ರೈತರ ಜಾನುವಾರುಗಳಿಗೆ ಅನುಕೂಲವಾಗಲಿದೆ. ಯಾವುದೇ ಸಂದರ್ಭದಲ್ಲಿ ಜಾನುವಾರುಗಳಿಗೆ ಕಾಯಿಲೆಗಳು ಬಂದಾಗ ಸಹಾಯವಾಣಿ ಸಂಖ್ಯೆ 1962 ಗೆ ಕರೆ ಮಾಡಬಹುದು. ಮೀನುಗಾರಿಕೆ ಬಗ್ಗೆ ರೈತರಿಗೆ ಮಾಹಿತಿ ಒದಗಿಸಬೇಕಿದೆ. ಎಲ್ ಆ್ಯಂಡ್ ಟಿ ಕಂಪನಿಯವರ ಕಾರ್ಯವೈಖರಿ ಅμÁ್ಟಗಿ ಹೇಳಿಕೊಳ್ಳುವಂತಿಲ್ಲ. ಮುಂದಿನ ಸಭೆಗೆ ಮೇಲಾಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಜಿಲ್ಲೆಯಲ್ಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯಬೇಕು. ಮುಂಬರುವ ಸಭೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇಲಾಖೆಯಲ್ಲಿ ಕೈಗೊಳ್ಳಲಾದ ಮತ್ತು ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.

ಕರ್ನಾಟಕ ಸರ್ಕಾರದ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಮಾತನಾಡಿ, ಜಾನುವಾರುಗಳಿಗೆ ಕಾಲುಬಾಯಿ ಬೇನೆ, ಗಂಟಲು ಬೇನೆ, ಚಪ್ಪೆ ಬೇನೆ, ಕಂದು ರೋಗದ ಲಸಿಕೆಗಳನ್ನು ಹಾಕಬೇಕು. ಕುರಿ ಮತ್ತು ಮೇಕೆಗಳಿಗೆ ಕರಳು ಬೇನೆ ಹಾಗೂ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಲಸಿಕೆ ಹಾಕಿಸಬೇಕು. ಕಾಮಧೇನು, ಅನುಗ್ರಹ ಯೋಜನೆಗಳ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕಿದೆ. ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಹಾಯಧನವನ್ನು ನೀಡಬೇಕು. ಮುಂಗಾರು ಮಳೆ ಕೊರತೆಯಿಂದ ಮೇವಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಗ್ರಾಮೀಣ ಭಾಗದಲ್ಲಿ ಮೇವಿನ ಕೊರತೆ ಆಗದಂತೆ ಹೆಚ್ವಿನ ಮುತುವರ್ಜಿ ವಹಿಸಬೇಕು ಎಂದರು.

ಶಾಸಕರಾದ ಎನ್.ಎಚ್.ಕೋನರೆಡ್ಡಿ ಮಾತನಾಡಿ, ಗದಗ, ಹಾವೇರಿ ಜಿಲ್ಲೆಗಳಂತೆ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ ಒದಗಿಸಬೇಕಾಗಿದೆ. ರೈತರಿಗೆ ಪರಿಹಾರ ಕೊಡಿಸಿದರೆ ನೆಮ್ಮದಿ ಸಿಗಲಿದೆ. ಈಗಾಗಲೇ ಕೇಂದ್ರ ಬರ ಅಧ್ಯಯನ ತಂಡಕ್ಕೆ ಜಿಲ್ಲೆಯಲ್ಲಿನ ಬರದ ಪರಿಸ್ಥಿತಿಯನ್ನು ಸಂಪೂರ್ಣವಾಗಿ ವಿವರಿಸಿ, ವರದಿ ಸಲ್ಲಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಡಿಸೆಂಬರ್ ಅಂತ್ಯದವರೆಗೆ ಮೇವಿನ ಕೊರತೆ ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಮೇವು ಸಂಗ್ರಹಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗುವುದು. ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಲಾಗಿದ್ದು, ನೀರಿನ ಕೊರತೆ ಆಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೋರವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ. ಬೆಳೆ ಪರಿಹಾರದ ಕುರಿತು ಇನ್ಸುರೆನ್ಸ್ ಕಂಪನಿಯೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

ಸಣ್ಣ ನೀರಾವರಿ ಮುಖ್ಯ ಇಂಜಿನಿಯರ್‍ಗೆ ನೋಟಿಸ್ ನೀಡುವಂತೆ ಸೂಚನೆ : ಕೆಡಿಪಿ ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಬಗ್ಗೆ ಸರಿಯಾದ ವರದಿ ನೀಡದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಮುಖ್ಯ ಇಂಜಿನಿಯರ್ ಎನ್.ಎಸ್. ಭಜಂತ್ರಿ ಅವರಿಗೆ ನೋಟಿಸ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಹುಬ್ಬಳ್ಳಿ-ಧಾರವಾಡ ಪೆÇಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್, ಪೆÇಲೀಸ್ ವರಿμÁ್ಠಧಿಕಾರಿ ಡಾ.ಗೋಪಾಲ ಬ್ಯಾಕೋಡ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.