ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಬೈರತಿ ಸೂಚನೆ

ಕೆ.ಆರ್.ಪುರ,ಏ.೧೭-ಬೇಸಿಗೆ ಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ತಿಳಿಸಿದರು.
ಕೆ.ಆರ್.ಪುರ ಕ್ಷೇತ್ರದ ಟಿಸಿಪಾಳ್ಯ ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕಾವೇರಿ ನೀರಿನ ಪೂರೈಕೆ, ಅಗತ್ಯವಿದ್ದೆಡೆ ಕೊಳವೆ ಬಾವಿ ಹಾಗೂ ಟ್ಯಾಂಕರ್ ಗಳ ಮೂಲಕ ನೀರಿನ ಸಮಸ್ಯೆ ನಿವಾರಿಸುವುದಾಗಿ ನುಡಿದರು.
ರಸ್ತೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಸಮರ್ಪಕ ಬೆಳವಣಿಗೆಗೆ ಕ್ರಮ ಕೈಗೊಳ್ಳಲಾಗುವುದೆಂದು ನುಡಿದರು.
ಸಾರ್ವಜನಿಕರ ತೆರಿಗೆ ಹಣಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ತಿಳಿಸಿದರು. ಕ್ಷೇತ್ರದ ವಿವಿಧೆಡೆ ಅಭಿವೃದ್ಧಿ ಕಾಮಾಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು.
ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿದ್ದು, ಹಂತಹಂತವಾಗಿ ಜಾರಿಗೊಳಿಸುವುದಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ, ಎಪಿಎಂಸಿ ನಾಮನಿರ್ದೇಶಿತ ಸದಸ್ಯ ಬಿ.ವಿ.ಮಂಜುನಾಥ್, ಕ್ಷೇತ್ರದ ಉಪಾಧ್ಯಕ್ಷ ರವಿಕುಮಾರ್, ಮುಖಂಡರಾದ ಮೇಡಹಳ್ಳಿ ಜಗದೀಶ್,ರಮೇಶ್ ಗೌಡ, ಚಲಪತಿ,ಕೃಷ್ಣ, ಗೀರಿಶ್, ಇದ್ದರು.