ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಚರ್ಚೆ

ಹುಬ್ಬಳ್ಳಿ, ಜ13: ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಷಿ ಅವರು, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ರವರ ನೇತೃತ್ವದಲ್ಲಿ ಅವಳಿನಗರದ ಕುಡಿಯುವ ನೀರಿನ ಯೋಜನೆಯ ಬಗ್ಗೆ ಎಲ್ ಆಂಡ್ ಟಿ ಕಂಪನಿಯೊಂದಿಗೆ ಸಭೆ ನಡೆಯಿತು.
ಈ ಸಭೆಯಲ್ಲಿ ಈ ಹಿಂದೆ ಎಲ್ ಆಂಡ್ ಟಿ ಕಂಪನಿಯ ಲೋಪದೋಷಗಳ ಬಗ್ಗೆ ಚರ್ಚಿಸಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಅವಳಿನಗರದ ನಾಗರಿಕರಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಸಹ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ, ಮಹಾಪೌರರಾದ ಈರೇಶ ಅಂಚಟಗೇರಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಭೆಯಲ್ಲಿ ಪಾಲಿಕೆಯ ಆಯುಕ್ತರಾದ ಗೋಪಾಲಕೃಷ್ಣ, ಪಾಲಿಕೆಯ ಸಹಾಯಕ ಆಯುಕ್ತರು ಹಾಗೂ ಎಲ್ ಆಂಡ್ ಟಿ ನ ಅಧಿಕಾರಿಗಳು, ಜಲಮಂಡಳಿ ಅಧಿಕಾರಿಗಳು ಪಾಲ್ಗೊಂಡಿದ್ದರು.