ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ನಿಗಾವಹಿಸಿ

ಗದಗ,ಮಾ.16: ಮುಂಬರುವ ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ ಸಮರ್ಪಕ ನೀರು ಪೂರೈಕೆಗೆ ಅಗತ್ಯದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ನೀರಿನ ಪೂರೈಕೆಗೆ ಅಗತ್ಯ ಬಿದ್ದರೆ ಬೋರವೇಲ್‍ಗಳನ್ನು ಕೊರೆಸಲು ಅಥವಾ ಟ್ಯಾಂಕರ ಮೂಲಕ ನೀರು ಪೂರೈಕೆಗೆ ಅಗತ್ಯದ ಸಿದ್ದತೆಗಳನ್ನು ಮಾಡಿಟ್ಟುಕೊಳ್ಳಬೇಕು. ಅದೇ ರೀತಿ ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿಯೂ ನೀರಿನ ಅಭಾವವಾಗದಂತೆ ಅಗತ್ಯದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.
ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಸಾಕಷ್ಟು ಮೇವಿನ ದಾಸ್ತಾನ ಮಾಡಿಟ್ಟುಕೊಳ್ಳುವದರ ಜೊತೆಗೆ ಗೋಶಾಲೆಗಳನ್ನು ತೆರೆಯಲು À ಸ್ಥಳಗಳನ್ನು ಗುರುತಿಸಿ ಗೋಶಾಲೆಗಳಲ್ಲಿ ಅಗತ್ಯದ ಸೌಲಭ್ಯಗಳನ್ನು ಹಾಗೂ ಸಮರ್ಪಕ ನೀರು ಪೂರೈಕೆಗೆ ವ್ಯವಸ್ಥೆ ಮಾಡಿಟ್ಟುಕೊಳ್ಳಲು ತಿಳಿಸಿದರು.
ಸಧ್ಯ ವಾತಾವರಣದಲ್ಲಿ ತಾಪಮಾನ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ತಾಪಮಾನದಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಕುರಿತು ಅಗತ್ಯದ ಜಾಗೃತಿ ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಬೇಕು. ಅಲ್ಲದೇ ಪರೀಕ್ಷಾ ಸಮಯವಾದ ಹಿನ್ನಲೆಯಲ್ಲಿ ವಿಧ್ಯಾರ್ಥಿಗಳಲ್ಲಿಯೂ ಈ ಕುರಿತು ತಿಳುವಳಿಕೆ ಮೂಡಿಸಬೇಕು. ಆರೋಗ್ಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ನಿಯಮಿತಾಗಿ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ.ಬಿ, ಮಾತನಾಡಿ ವಾತಾವರಣದಲ್ಲಿ ತಾಪಮಾನ ಎರುತ್ತಿರುವ ಹಿನ್ನಲೆಯಲ್ಲಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವ ಸಮಯದಲ್ಲಿ ಬದಲಾವಣೆ ಮಾಡಲಾಗುವುದು. ಅಲ್ಲದೇ ಏರುತ್ತಿರುವ ತಾಪಮಾನದಿಂದಾಗುವ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯ ಇಲಾಖೆಯಿಂದ ನಿರಂತರ ಜಾಗೃತಿ ಮೂಡಿಸಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಉಪವಿಭಾಗಾಧಿಕಾರಿ ಅನ್ನಪೂರ್ಣ ಸೇರಿದಂತೆ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.