ಕುಡಿಯುವ ನೀರು ಯೋಜನೆ, ಸಿಇಓರಿಂದ ಕಾಮಗಾರಿ ಪರಿಶೀಲನೆ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಮಾ. 3 :-  ತಾಲ್ಲೂಕಿನ ಶಿವಪುರ ಗ್ರಾಮದ ಸಮೀಪದಲ್ಲಿ ನಡೆಯುತ್ತಿರುವ ಪಾವಗಡ ಬಹುಗ್ರಾಮ ಕುಡಿಯುವ ನೀರಿನ ಯೋಜನಾ ಕಾಮಗಾರಿಯನ್ನು ಗುರುವಾರ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ಅವರು ಪರಿಶೀಲಿಸಿದರು.
ವಿವಿಧ ಹಂತದ ಪ್ರಗತಿಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು ಕಾಮಗಾರಿ ಸ್ಥಳದಲ್ಲಿ ಕಂಡುಬಂದ ನ್ಯೂನತೆಗಳನ್ನು ಸರಿಪಡಿಸಿ ಕಾಮಗಾರಿ ಮುಂದುವರೆಸಲು ಸೂಚಿಸಿದರು. ಕಾಮಗಾರಿ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.