ಕುಡುತಿನಿ ವೃದ್ಧೆ ಕಾಣೆ

ಬಳ್ಳಾರಿ,ಅ.30- ಕುಡುತಿನಿ ಪೊಲೀಸ್ ಠಾಣೆ ವ್ಯಾಪ್ತಿಯ 73 ವರ್ಷದ ಗಂಗಮ್ಮ ಮುಷ್ಠಿಗಟ್ಟಿ ಎಂಬ ವೃದ್ಧೆಯು ಅ.24 ರಿಂದ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ ಎಂದು ಕುಡುತಿನಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಮಹಿಳೆಯ ಚಹರೆ: 4.8 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧರಣ ಮೈಕಟ್ಟು, ಕೋಲುಮುಖ ಹೊಂದಿದ್ದು ಬಲಗೈ ಮೇಲೆ ನಾಗರಹಾವಿನ ಹಚ್ಚೆ ಗುರುತು ಇರುತ್ತದೆ. ಹಸಿರು ಬಣ್ಣದ ಸೀರೆ ಮತ್ತು ನೀಲಿ ಬಣ್ಣದ ಕುಪ್ಪಸ ಧರಿಸಿರುತ್ತಾರೆ. ಕನ್ನಡ, ತೆಲುಗು ಭಾಷೆಯನ್ನು ಮಾತನಾಡುತ್ತಾಳೆ.
ಸದರಿ ವೃದ್ಧೆ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ಕುಡುತಿನಿ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು