ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ


ಸುಳ್ಯ, ಎ.೧೭- ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ, ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಏ.೧೬ರ ರಾತ್ರಿ ೯.೧೫ ರ ಹೊತ್ತಿಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿ ಬಿದ್ದುಕೊಂಡಿರುವುದು ಗಮನಿಸಿದ ಕೆ.ಎಸ್.ಆರ್.ಟಿ.ಸಿ.ಯ ಟಿ.ಸಿ. ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಬಂದು ಪರಿಶೀಲಿಸಿದಾಗ ಆ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಮೃತದೇಹದ ಬಳಿ ಇದ್ದ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್ ನ ಆಧಾರದಲ್ಲಿ ಆ ವ್ಯಕ್ತಿ ಮಂಗಳೂರಿನ ಅಚ್ಚುತ ಎಂದು ತಿಳಿದುಬಂದಿದೆ. ಪೊಲೀಸರು ಮೃತದೇಹವನ್ನು ಕೆ.ವಿ.ಜಿ. ಆಸ್ಪತ್ರೆಗೆ ಕೊಂಡೊಯ್ದು ಶೈತ್ಯಾಗಾರದಲ್ಲಿ ಇರಿಸಿದ್ದು, ತನಿಖೆ ಮುಂದುವರೆದಿದೆ.