ಕುರಿಗಾರರಿಗೆ ಸೌಲಭ್ಯ: 23 ರಂದು ಮೆರವಣಿಗೆ

????????????????????????????????????

ಬೀದರ್:ನ.22: ಸಾವಿಗೀಡಾದ ಕುರಿಗಳಿಗೆ ಪರಿಹಾರ ಒದಗಿಸಲು ಒತ್ತಾಯಿಸಿ ನವೆಂಬರ್ 23 ರಂದು ನಗರದಲ್ಲಿ ಕುರಿಗಾರರೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕುರಿ ಮತ್ತು ಮೇಕೆ ಮಹಾ ಮಂಡಳ ಅಧ್ಯಕ್ಷ ಪಂಡಿತರಾವ್ ಚಿದ್ರಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 11ಕ್ಕೆ ಶ್ರೀ ಸಾಯಿ ಶಾಲೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲೆಯ ಎಲ್ಲ ತಾಲ್ಲೂಕುಗಳ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪ್ರತಿನಿಧಿಗಳು ಹಾಗೂ ಕುರಿಗಾರರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಾವಿಗೀಡಾದ 1,200 ಕುರಿಗಳಿಗೆ ಪರಿಹಾರ ಕಲ್ಪಿಸಬೇಕು. ಕುರಿಗಳ ಆರೋಗ್ಯ ರಕ್ಷಣೆಗಾಗಿ ಔಷಧಿ ಪೂರೈಸಬೇಕು. ಎಕ್ಸ್ ಗ್ರೆಟಿಯಾ ಯೋಜನೆ ಮುಂದುವರಿಸಬೇಕು. ಅರಣ್ಯ ಕುರಿಗಾರರ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಹೇಳಿದ್ದಾರೆ.