(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜೂ.23: ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕ ವಿಭಾಗದ ಕುರುಗೋಡು-ಕೋಳೂರು ಬ್ಲಾಕ್ ಅಧ್ಯಕ್ಷರನ್ನಾಗಿ ಕೆ.ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಕಂಪ್ಲಿ ಶಾಸಕ ಜಿ.ಎನ್.ಗಣೇಶ್ ಅವರ ಮಾರ್ಗದರ್ಶನದಲ್ಲಿ ಪಕ್ಷದ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಅಲಿವೇಲು ಸುರೇಶ್, ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಿದ್ದಾರೆ.
ಈ ಜವಾಬ್ದಾರಿ ವಹಿಸಿಕೊಂಡು ಶಾಸಕರ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಕಾರದಿಂದ ಪಕ್ಷ ಸಂಘಟಿಸಲು ಸೂಚಿಸಿದ್ದಾರೆ.
ಪಕ್ಷದ ಜಿಲ್ಲಾ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್, ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಕುರುಗೋಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಗಿ ಮಲ್ಲಯ್ಯ, ವಕ್ತಾರ ಚನ್ನಬಸವನಗೌಡ ಮೊದಲಾದ ಮುಖಂಡರ ಸಹಕಾರದಿಂದ ಪಕ್ಷ ವಹಿಸಿರುವ ಜವಾಬ್ದಾರಿ ವಹಿಸಿಕೊಂಡು ಕಾರ್ಮಿಕರು, ನೌಕರರನ್ನು ಸಂಘಟಿಸಿ ಪಕ್ಷ ಸದೃಢಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕೃಷ್ಣಮೂರ್ತಿ ಹೇಳಿದ್ದಾರೆ.