ಕುರುಬರ ರಾಷ್ಟ್ರೀಯ ಅಧಿವೇಶನ: ನಾಳೆ ಸಭೆ

ಬೀದರ್:ಸೆ.15: ಶಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ವತಿಯಿಂದ ಬೆಳಗಾವಿಯಲ್ಲಿ ಅಕ್ಟೋಬರ್ 2 ಮತ್ತು 3 ರಂದು ನಡೆಯಲಿರುವ ಕುರುಬರ ರಾಷ್ಟ್ರೀಯ ಸಮ್ಮೇಳನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನಾ ಸಮಾರಂಭದ ಪ್ರಯುಕ್ತ ರಾಯಚೂರು ಜಿಲ್ಲೆಯ ತಿಂಥಣಿ ಬ್ರಿಜ್‍ನ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದಲ್ಲಿ ಸೆ. 16 ರಂದು ಆರು ಜಿಲ್ಲೆಗಳ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ.
ಸಿದ್ಧರಾಮಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಪಾಲ್ಗೊಳ್ಳಲಿದ್ದಾರೆ ಎಂದು ಕಲಬುರಗಿ, ಯಾದಗಿರಿ, ಬೀದರ್ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ತಿಳಿಸಿದ್ದಾರೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಗಳ ಕುರುಬ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.