ಕುರುಬರ ಸಂಘದ ನಗರ ಅಧ್ಯಕ್ಷರಾಗಿ ಶ್ರೀಧರ್ ಆಯ್ಕೆ

ತುಮಕೂರು, ಡಿ. ೯- ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ನಗರ ಅಧ್ಯಕ್ಷರಾಗಿ ಸಿರಾಗೇಟ್‌ನ ಹೆಚ್.ಜಿ.ಶ್ರೀಧರ್ ಆಯ್ಕೆಯಾಗಿದ್ದಾರೆ.
ನಗರ ಸಮಿತಿಯಲ್ಲಿ ಸಂಘಟನಾ ಕಾರ್ಯದರ್ಶಿಯಾಗಿದ್ದು, ಕನಕ ಗೌರವ ಪ್ರಶಸ್ತಿ ಪಡೆದಿರುವ ಶ್ರೀಧರ್ ಈಗ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ತಮ್ಮ ಸೇವಾ ಕ್ಷೇತ್ರ ವಿಸ್ತರಿಸಿಕೊಂಡಿದ್ದಾರೆ.
ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾಧ್ಯಕ್ಷ ಎ.ಮಹಾಲಿಂಗಯ್ಯ ಅವರು ಆಯ್ಕೆ ಮಾಡಿ ಆದೇಶ ಪತ್ರ ನೀಡಿ, ಸಂಘದ ನೀತಿ ನಿಯಮಗಳಿಗೆ ಬದ್ಧವಾಗಿ, ಸಮಾಜದ ಜನತೆಗೆ ಸಹಕಾರ ನೀಡುವಂತೆ ಶುಭ ಹಾರೈಸಿದ್ದಾರೆ.
ಸೇವಾ ಮನೋಭಾವದಿಂದ ತಮ್ಮನ್ನು ತಾವು ಗುರುತಿಸಿಕೊಂಡಿರುವ ಶ್ರೀಧರ್ ಹೋರಾಟ ಮನೋಭಾವ ಬೆಳೆಸಿಕೊಂಡು ಕುರುಬ ಸಮಾಜದ ಅಭಿವೃದ್ಧಿಗೆ ಮಿಡಿಯುತ್ತಿರುವುದರಿಂದ ಕುರುಬ ಸಂಘದ ನಗರಾಧ್ಯಕ್ಷರಾಗಿ ಆಯ್ಕೆ ಮಾಡಿ ಜವಾಬ್ದಾರಿ ನೀಡಿರುವುದು ಖುಷಿಯನ್ನು ತಂದಿದೆ.
ಜತೆಗೆ ಜನಾಂಗಕ್ಕಾಗಿ ದುಡಿಯುವ ಅವಕಾಶ ಸಿಕ್ಕಿದ್ದು, ಜವಾಬ್ದಾರಿ ಹೆಚ್ಚಿದೆ ಸಮಾಜದ ಶ್ರೇಯೋಭಿವೃದ್ಧಿಗೆ ಹಾಗೂ ನಗರದ ಜನತೆಯ ಏಳ್ಗೆಗೆ ಶ್ರಮಿಸುವುದಾಗಿ ಶ್ರೀಧರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಬಸವರಾಜು.ವೈ., ಪ್ರಧಾನ ಕಾರ್ಯದರ್ಶಿ ಎಂ.ಆರ್.ಚಂದ್ರಶೇಖರ್, ಕಾರ್ಯದರ್ಶಿ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.