ಕುರುಬ ಸಂಘ ಯುವ ಘಟಕಕ್ಕೆ ನಂದೀಶ್ ಅಧ್ಯಕ್ಷ

ಮಾಲೂರು, ಜು. ೨೭:ಪಟ್ಟಣದ ಕನಕದಾಸರ ವಿದ್ಯಾರ್ಥಿ ನಿಲಯದಲ್ಲಿ ನಡೆದ ಕರ್ನಾಟಕ ಪ್ರದೇಶ್ ಕುರುಬ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ತಾಲ್ಲೂಕು ಕುರುಬ ಸಂಘದ ಯುವ ಘಟಕಕ್ಕೆ ಯುವ ಮುಖಂಡ ನಂದೀಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.
ಪಟ್ಟಣದ ಕನಕದಾಸ ವಿದ್ಯಾರ್ಥಿ ನಿಲಯದಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಅಂಜನಿ ಸೋಮಣ್ಣ ಹಾಗೂ ತಾಲೂಕು ಕುರುಬ ಸಂಘದ ಅಧ್ಯಕ್ಷ ಬಲ್ಲಳ್ಳಿ ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕುರುಬ ಸಂಘದ ಸಭೆಯಲ್ಲಿ ಯುವ ಮುಖಂಡ ನಂದೀಶ್ ಅವರನ್ನು ಕುರುಬ ಸಂಘದ ಯುವ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.ನೂತನ ಅಧ್ಯಕ್ಷರನ್ನು ತಾಲೂಕು ಕುರುಬ ಸಂಘದ ವತಿಯಿಂದ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನನ್ನು ಕುರುಬ ಸಂಘದ ತಾಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಮುಂಬರುವ ದಿನಗಳಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಅಂಜನಿ ಸೋಮಣ್ಣ, ತಾಲೂಕು ಕುರುಬ ಸಂಘದ ಅಧ್ಯಕ್ಷ ಬಲ್ಲಹಳ್ಳಿ ನಾರಾಯಣಸ್ವಾಮಿ ಹಾಗೂ ತಾಲೂಕು ಸಂಘದ ಪದಾಧಿಕಾರಿಗಳ ಸಲಹೆ ಮಾರ್ಗದರ್ಶನ ಪಡೆದು ಯುವಘಟಕವನ್ನು ಸಂಘಟಿಸಲಾಗುವುದು, ಜೊತೆಗೆ ಸಮುದಾಯದವರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು, ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಕುರುಬ ಸಮುದಾಯದವರಲ್ಲಿ ಜಾಗೃತಿ ಮೂಡಿಸಿ ಸರ್ಕಾರಿ ಸೌಲಭ್ಯಗಳನ್ನು ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕುರುಬ ಸಂಘದ ಜಿಲ್ಲಾ ಉಪಾಧ್ಯಕ್ಷ ರವಿಚಂದ್ರ, ತಾಲೂಕು ಕುರುಬ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ಪರಸನಹಳ್ಳಿ ವಿಜಿಯೇಂದ್ರ, ಸಂಘದ ಸದಸ್ಯರುಗಳಾದ ಆನೆಪುರ ದೇವರಾಜು, ಟಿ.ದೇವರಾಜು, ಅಂಜನಿ ಭರತ್, ಎಂ.ಸಿ.ರವಿ ಮಹೇಶ್, ಇನ್ನಿತರರು ಹಾಜರಿದ್ದರು.