ಕುರುಬ ಸಮಾಜಕ್ಕೆ ಪ.ಪಂ. ಮೀಸಲಾತಿ ಘೋಷಣೆಗೆ ಆಗ್ರಹ

ಧಾರವಾಡ,ನ5 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕನಕ ಜಯಂತಿಯಂದು ಕುರುಬ ಸಮಾಜಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಘೋಷಣೆ ಮಾಡಬೇಕು ಎಂದು ಬಸವರಾಜ ದೇವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬ ಜನಾಂಗ ಭಾರತದ ಮೂಲ ನಿವಾಸಿಗಳು ಪರಿಶಿಷ್ಟ ಪಂಗಡ, ಬುಡಕಟ್ಟು, ಅಲೆಮಾರಿ ಜನಾಂಗಕ್ಕೆ ಸೇರಿದ ಜನಾಂಗ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಕುರುಬ ಸಮಾಜಕ್ಕೆ ಮೀಸಲಾತಿ ಒದಗಿಸಬೇಕು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಮುಂದಿನ ದಿನಗಳಲ್ಲಿ ಪರಿಶಿಷ್ಟ ಪಂಗಡ ಕುರುಬರ ಮೀಸಲಾತಿ ಆಂದೋಲನ ಒಕ್ಕೂಟ ವತಿಯಿಂದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಕುರುಬ ಸಮಾಜ ವೇದಿಕೆ ಅಧ್ಯಕ್ಷ ಬಸವರಾಜ ಕಟಗಿ ಮಾತನಾಡಿ, ಈ ಹಿಂದೆ ಕುರುಬ ಸಮಾಜಕ್ಕೆ ಮೀಸಲಾತಿ ಒದಗಿಸಬೇಕು ಎಂದು ಆಗ್ರಹಿಸಿ ಹೋರಾಟ ಮಾಡಲಾಗಿದೆ ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಕುರುಬ ಸಮಾಜದ ಹೋರಾಟ ಉಗ್ರ ಸ್ವರೂಪ ತಾಳುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿವಾನಂದ ಮುತ್ತಣ್ಣನವರ, ಬಸವರಾಜ ಮಲಕಾರಿ, ಬಸವರಾಜ ಕಟಗಿ, ಬಸವರಾಜ ಗುಡೆನ್ನವರ, ರಮೇಶ ನಲವಡಿ ಸೇರಿದಂತೆ ಹಲವರು ಇದ್ದರು.