ಕುರ್ಕಿ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ, ಜೂ.6: ತಾಲ್ಲೂಕಿನ ಕುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇತೊಗಲೇರಿ ಗ್ರಾಮದ ಬಹುಗ್ರಾಮ ಕುಡಿಯುವ ನೀರಿನ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಂದ ಸಸಿ ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ನಂದ್ಯಪ್ಪ, ಪಿಡಿಓ ಸುರೇಖಾ ಐ.ಬಿ, ಗ್ರಾಮ ಪಂಚಾಯಿತಿಯ ಸದಸ್ಯರಾದ ಸಿ.ಕೆ ಬಸವರಾಜಪ್ಪ, ಶಿವಮೂರ್ತಿ, ಹನುಮಂತಪ್ಪ, ಬಿ.ಓ ರಾಜು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಎಸ್.ಡಿ.ಎ.ಎ, ಸಿಬ್ಬಂದಿ ವರ್ಗ ಹಾಗೂ ಹಿರಿಯ ಮುಖಂಡರು ಹಾಜರಿದ್ದರು.