ಕುವೆಂಪು ವಾಕ್ಯ ಬದಲಾವಣೆ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ

(ಸಂಜೆವಾಣಿ ವಾರ್ತೆ)
ಮಾನ್ವಿ.ಫೆ.೨೦- “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎನ್ನುವ ಕುವೆಂಪು ಅವರ ಅರ್ಥಪೂರ್ಣ ವಾಕ್ಯವನ್ನು ಬದಲಾಯಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಕೂಡಲೇ ಬದಲಾಯಿಸಬೇಕು ಇಲ್ಲವಾದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತಿನಿಂದ ರಾಜ್ಯದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗುತ್ತದೆ ಎಂದು ಸದಸ್ಯ ಅಂಬು ನಾಯಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತಾನಾಡಿದ ಅವರು ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕೆಲವೊಂದು ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಗೊಂದಲವನ್ನು ಸೃಷ್ಟಿ ಮಾಡುತ್ತಿದೆ ಸಮಾಜ ಕಲ್ಯಾಣ ಇಲಾಖೆಯ ಆದೀನದಲ್ಲಿ ಬರುವ ಶಾಲೆಗಳಲ್ಲಿ ಪರಂಪರೆಯಿಂದ ನಡೆದುಕೊಂಡು ಬಂದಿದ್ದ ಸರಸ್ವತಿ, ಗಣಪತಿ ಮೊದಲಾದ ರೀತಿಯ ಧಾರ್ಮಿಕ ಪೂಜೆಗಳನ್ನ ಮಾಡುವುದನ್ನು ನಿಷೇಧ ಮಾಡಿ ಗೊಂದಲವನ್ನ ಸೃಷ್ಟಿ ಮಾಡಿತ್ತು, ಸಾರ್ವಜನಿಕರ ಪ್ರತಿಭಟನೆಗೆ ಮಣಿದು ಆ ಆದೇಶವನ್ನು ಹಿಂತೆಗೆದುಕೊಂಡಿದ್ದ ಸರ್ಕಾರ ಈಗ ಮತ್ತೆ ವಸತಿ ಶಾಲೆಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರ ವಾಕ್ಯ “ಜ್ಞಾನ ದೇಗುವಿದು ಕೈಮುಗಿದು ಒಳಗೆ ಬನ್ನಿ”, ಎನ್ನುವ ಘೋಷಣೆಯನ್ನ ಬದಲಾವಣೆ ಮಾಡಿ “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ”, ಎನ್ನುವ ವಾಕ್ಯವನ್ನು ಹಾಕಿರುವ ಸರ್ಕಾರದ ನಡೆಯನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.
ಈ ರೀತಿಯ ಘಟನೆಗಳಿಂದ ಎಲ್ಲಾ ವಿದ್ಯಾರ್ಥಿ ಸಮುದಾಯಕ್ಕೆ ಪ್ರೇರಣಾದಾಯಕವಾಗಿರುವ ಕರ್ನಾಟಕ ರಾಜ್ಯದ ಪ್ರಶಸ್ತಿ ಪುರಸ್ಕೃತ ಕುವುಂಪುರವರ ವಾಕ್ಯಗಳನ್ನ ತಿರುಚಿ ಸರ್ಕಾರ ವಿದ್ಯಾರ್ಥಿ ಸಮುದಾಯಕ್ಕೆ ಯಾವ ಸಂದೇಶವನ್ನ ಕೊಡಲು ಹೊರಟಿದೆ ಎಂಬುದು ರಾಜ್ಯದ ವಿದ್ಯಾರ್ಥಿ ಸಮುದಾಯದ ಪ್ರಶ್ನೆಯಾಗಿದೆ ಎಂದರು.
ಕೂಡಲೇ ಸರ್ಕಾರ ಆದೇಶವನ್ನು ಹಿಂಪಡೆದು ಈ ಮೊದಲಿನ ವಾಕ್ಯವನ್ನೇ ಉಳಿಸಿಕೊಳ್ಳಬೇಕು ಇಲ್ಲವಾದಲ್ಲಿ ನಮ್ಮ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಹೋರಾಟಕ್ಕೆ ಕರೆ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆ ಕಾರ್ಯದರ್ಶಿ ಪಿ ಗುರುಕಿರಣ ಶೆಟ್ಟಿ, ಈ ಸಂದರ್ಭದಲ್ಲಿ ಕೊಂಡಯ್ಯ ನಾಯಕ, ವಿರೇಶ, ಮಂಜು, ಚೇತನ್, ಅಭಿ, ವಿನೋದ, ಮಲ್ಲು, ಜಗದೀಶ್, ವಿರೇಶ ನಾಯಕ,
ಸೇರಿದಂತೆ ಅನೇಕರು ಇದ್ದರು..