ಕುಷ್ಟರೋಗಿಗಳಿಗೆ ಆಹಾರ ಕಿಟ್ ವಿತರಣೆ


ರಮೇಶ್ ಯಾದವ್ ಸೇವಾ ಕಾರ್ಯ ಶ್ಲಾಘನೀಯ-ರವಿ ಭೋಸುರಾಜು
ರಾಯಚೂರು,ಜೂ.೫- ಕೊರೋನಾದಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಸಂದ್ಗಿಗ್ದ ಪರಿಸ್ಥಿತಿಯಲ್ಲಿ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷ ರಮೇಶ್ ಯಾದವ್ ಅವರಿಂದ ಕುಷ್ಟರೋಗಿಗಳ ಕಾಲೋನಿಯಲ್ಲಿಯ ನಿವಾಸಿಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಕಾಂಗ್ರೆಸ್‌ನ ಯುವ ಮುಖಂಡ ರವಿ ಬೋಸುರಾಜು ಹೇಳಿದರು.
ಅವರಿಂದು ನಗರದ ಕುಷ್ಟರೋಗಿಗಳ ಕಾಲೋನಿಯಲ್ಲಿ ನಿವಾಸಿಗಳಿಗೆ ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷ ರಮೇಶ್ ಯಾದವ್ ಅವರಿಂದ ಆಹಾರ ಕಿಟ್‌ಗಳನ್ನು ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊರೋನಾ ವೈರಸ್ ಸೋಂಕಿನಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದ್ದು, ಇಂತಹ ಸಂದರ್ಭದಲ್ಲಿ ಬಡವರಿಗೆ ಆಹಾರ ಕಿಟ್‌ಗಳನ್ನು ವಿತರಿಸುತ್ತಿರುವುದು ಉತ್ತಮವಾಗಿದೆ. ಇಂದು ಮಾಜಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸುರಾಜು ಅವರ ಜನ್ಮದಿನದಂಗವಾಗಿ ನಗರದ ಅನೇಕ ಕಡೆಗಳಲ್ಲಿ ಬಡವರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.
ಜಿಲ್ಲೆಯ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಆಹಾರ ಕಿಟ್ ವಿತರಣೆ, ಕೊರೋನಾ ವೈರಸ್ ಜಾಗೃತಿ ಸೇರಿದಂತೆ ಅನೇಕ ಸೇವಾ ಕಾರ್ಯಗಳನ್ನು ಕೈಗೊಂಡಿದ್ದು, ಅವರಿಗೆ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಿಸಾನ್ ಸೆಲ್‌ನ ಜಿಲ್ಲಾಧ್ಯಕ್ಷ ಹಾಗೂ ಕಂಪ್ಲಿ ವಿಧಾನ ಸಭಾ ಕ್ಷೇತ್ರದ ಸಂಯೋಜಕ ಜಿ.ರಮೇಶ್ ಯಾದವ್, ವೀರೇಶ್ ನಾಯಕ್, ವೀರೇಶ್ ಭೋವಿ, ಕಪ್ಪಲ್ ರಮೇಶ್ ಯಾದವ್, ಹರೀಶ, ವೀರೇಶ್, ರಾಜು ಯಾದವ್, ಶ್ರೀನು, ಸಿ.ಕೆ.ವೀರೇಶ್ ಉಪಸ್ಥಿತರಿದ್ದರು.