ಕುಷ್ಠರೋಗ ಸಮೀಕ್ಷೆ ಕಾರ್ಯಕ್ರಮ

ಯಾದಗಿರಿ : ಮೇ 05 : ಕುಷ್ಠರೋಗ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಗರಿಮಾ ಪನ್ವಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

 ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಡಾ. ಲಕ್ಷ್ಮೀಕಾಂತ ಅವರು ಮಾತನಾಡಿ ಈ ಕುಷ್ಠರೋಗ ಲಕ್ಷಣಗಳಾದ ಚರ್ಮದ ಮೇಲಿನ ಯಾವುದೇ ತಿಳಿ-ಬಿಳಿ ತಾಮ್ರ ಬಣ್ಣದ ಮಚ್ಚೆ, ದಪ್ಪವಾದ ಎಣ್ಣೆ ಪಸರಿಸಿದಂತಹ ಹೊಳೆಯುವ ಚರ್ಮ, ದೇಹದ ಮೇಲಿನ ಘಂಟುಗಳು, ಕಣ್ಣಿನ ರೆಪ್ಪೆಗಳನ್ನು ಮುಚ್ಚುವಲ್ಲಿ ತೊಂದರೆ, ಕೈ ಅಥವಾ ಕಾಲುಗಳಲ್ಲಿನ ಬಹುದಿನದ ಗಾಯ, ಕೈ ಅಥವಾ ಕಾಲುಗಳಲ್ಲಿ ಬೆರಳು ಮಡಿಚಿಕೊಂಡಿರುವುದು, ನಡೆಯುವಾಗ ಕಾಲು ಎಳೆಯುವುದು, ಕೈ ಅಥವಾ ಕಾಲುಗಳಲ್ಲಿ ಜುಮ್ಮೆನುಸುವಿಕೆ ಮತ್ತು ಮರುಗಟ್ಟುವಿಕೆ, ಅಂಗೈ ಅಥವಾ ಪಾದಗಳಲ್ಲಿ ಶೀತ, ಬಿಸಿ, ಸಂವೇದನೆ ನಷ್ಟವಾಗಿರುವುದು, ಕೈಗಳಲ್ಲಿ ವಸ್ತುಗಳಲ್ಲಿ ಹಿಡಿಯಲು ಹಾಗೂ ಪಾದರಕ್ಷೆ ತೊಡುವಲ್ಲಿ ಬಲಹೀನತೆ ಇವುಗಳೆಲ್ಲವೂ ಕುಷ್ಠರೋಗದ ಲಕ್ಷಣಗಳಾವೆ.

 ಇಂತಹ ಲಕ್ಷಣಗಳು ಕಂಡು ಬಂದರೆ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರಿಗೆ ತೋರಿಸಬೇಕು ಎಂದು ಅವರು ತಿಳಿಸಿದರು. ಈ ಕುಷ್ಠರೋಗ ನಿರ್ವಣೆಗೆ  ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಕುಷ್ಠರೋಗದ ಸಮೀಕ್ಷೆ ನಡೆಸುತ್ತಾರೆ ಎಂದು ಮಾಹಿತಿ ನೀಡಿದ್ದರು.

 ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಶ್ರೀ ಶಾಂತಗೌಡ , ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಾದ ರತ್ನಾಕರ್, ಆರ್.ಸಿ.ಹೆಚ್.ಓ ಡಾ. ಮಲ್ಲಪ್ಪ, ಶಹಾಪೂರ, ಸುರಪುರ, ಯಾದಗಿರಿ ತಾಲೂಕು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.