ಕುಸ್ತಿಪಟುಗಳ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜೂ.01: ಮಹಿಳಾ ಕುಸ್ತಿಪಟುಗಳ ಹೋರಾಟವನ್ನು  ಬಿಜೆಪಿಯ ಕೇಂದ್ರ ಸರ್ಕಾರ ಹತ್ತಿಕ್ಕುತ್ತಿದೆಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.
ಮಹಿಳಾ ಕ್ರೀಡಾ ಪಟುಗಳ ಹೋರಾಟವನ್ನು ಹತ್ತಿಕ್ಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇಂದು  ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ  ರಾಷ್ಟ್ರಪತಿಯರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಸ್ ಶಿವಶಂಕರ್, ಕರ್ನಾಟಕ ರಾಜ್ಯ ರೈತ ಸಂಘದ ಮಾಧವರೆಡ್ಡಿ, ಎ ಐ ಕೆ ಕೆ ಎಂ ಎಸ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಗೋವಿಂದ್, ಕರ್ನಾಟಕ ರಾಜ್ಯ ರೈತ ಸಂಘದ ಸಂಘನಕಲ್ಲು ಕೃಷ್ಣಪ್ಪ  ಮತ್ತು  ಗುರಳ್ಳಿ ರಾಜ  ಸದಸ್ಯರಾದ ಲೇಪಾಕ್ಷಿ,  ಪ್ರಭಾಕರ ರೆಡ್ಡಿ, ಓಂಕಾರಿ ಗೌಡ ಸೇರಿದಂತೆ ಇತರರು ಇದ್ದರು