
ಬೀದರ್:ಜು.12: ಕರ್ನಾಟಕ ಕಾಲೇಜಿನ ಬಿಕಾಂ ದ್ವಿತೀಯ ಸೆಮ್ ವಿದ್ಯಾರ್ಥಿನಿ ಕು.ನಿವೇದಿತಾ. ಅವರು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಬೆಂಗಳೂರು ವತಿಯಿಂದ “ಹಸಿರು ನಗರಿಕರಣ” ಎಂಬ ವಿಷಯ ಕುರಿತು ನಡೆಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.
ನಿವೇದಿತಾ ಮಾರ್ಗದರ್ಶಕಿಯಾಗಿ . ಭೌತಶಾಸ್ತ್ರ ವಿಭಾಗದ ಶ್ವೇತಾ ಪಾಟೀಲ್ ಕಾರ್ಯನಿರ್ವಹಿಸಿದ್ದಾರೆ.
ಬಹುಮಾನ ಪಡೆದ ಕು.ನಿವೇದಿತಾ ಹಾಗೂ ಪ್ರಾಧ್ಯಾಪಕಿ ಶ್ವೇತಾ ಪಾಟೀಲ ಅವರಿಗೆ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ ಶಟಕಾರ, ಕಾರ್ಯದರ್ಶಿ ಸಿದ್ರಾಮ ಪಾರಾ, ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ್ ಹಂಗರಗಿ ಹರ್ಷವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.