ಕೂಡ್ಲಿಗಿಯ ಎನ್.ವೈ.ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ: ವಿಜಯನಗರ ಜಿಲ್ಲೆ ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಇಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಿರ್ಸಿಯಲ್ಲಿ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ಪತ್ರ ನೀಡಿದರು.

ಈ ಹಿಂದೆ ಮೊಳಕಾಲ್ಮುರು ಕ್ಷೇತ್ರದಿಂದ ನಾಲ್ಕು ಬಾರಿ, ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡದ ಕಾರಣ ಬಿಜೆಪಿ ಸೇರಿ ಕೂಡ್ಲಿಗಿ‌ ಶಾಸಕರಾಗಿದ್ದರು.
ಈ ಬಾರಿ ವಯಸ್ಸಿನ ಕಾರಣ ಬಿಜೆಪಿ ಟಿಕೆಟ್ ನೀಡಲ್ಲ ಎಂದು. ಬಿಜೆಪಿಗೆ ರಾಜೀನಾಮೆ ನೀಡಿ. ಮತ್ತೆ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಕೇಳಿದ್ದಾರಂತೆ.