ಕೂಲಿಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಿರವಾರ,ಸೆ.೨೭-ತಾಲೂಕಿನ ಕಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಭಾಗ್ಯನಗರ ಕ್ಯಾಂಪ್ ನಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳು ಎತ್ತುವ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು.
ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದ್ದು, ಪ್ರತಿಯೊಂದು ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ೧೦೦ ದಿನ ಕೂಲಿ ಕೆಲಸವನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದೆ. ಕೂಲಿ ಕೆಲಸದ ಜೊತೆಗೆ ,ಬಚ್ಚಲು ಗುಂಡಿ, ಕೃಷಿಹೊಂಡ, ದನದ ಶೆಡ್, ಕುರಿ, ಮೆಕೆ ಸಾಕಾಣಿಕೆಗಾಗಿ ಶೆಡ್ ಗಳ ನಿರ್ಮಾಣ ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅವಕಾಶವಿದೆ. ಹಾಗಾಗಿ ಪ್ರತಿಯೊಬ್ಬರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಐಇಸಿ ಸಂಯೋಜಕ ರಾಜೇಂದ್ರ ಕುಮಾರ ತಿಳಿಸಿದರು.
ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ, ಹೆಚ್ ಐ ವಿ ಸೇರಿದಂತೆ ವಿವಿಧ ಆರೋಗ್ಯದ ತಪಾಸಣೆ ಮಾಡಲಾಯಿತು. ಅಗತ್ಯ ಇರುವವರಿಗೆ ಮಾತ್ರೆಗಳನ್ನು ನೀಡಲಾಯಿತು.
ಸಮುದಾಯ ಆರೋಗ್ಯ ಅಧಿಕಾರಿ ನಾಗರಾಜ, ಬಿಎಫ್ಟಿ ನಾಗಪ್ಪ, ಮೇಟಿ, ಕೂಲಿಕಾರರು ಇದ್ದರು.