ಕೂಸಿನ ಮನೆ ಉದ್ಘಾಟನೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜ.21: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ನರೇಗಾ ಕೂಲಿ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಅವರ ಮಕ್ಕಳ ಸುರಕ್ಷತೆ ಮತ್ತು ಪೋಷಣೆ ಅಗತ್ಯವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕೂಸಿನ ಮನೆ ಅನುಷ್ಠಾನಗೊಳಿಸಲಾಗಿದೆ ಎಂದು ಗ್ರಾ.ಪಂ.ಅಧ್ಯಕ್ಷೆ ವಿ.ಶಾರದಮ್ಮ ತಿಳಿಸಿದರು.
ತಾಲೂಕಿನ ಕರೂರು ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ನರೇಗಾ ಯೋಜನೆಯಡಿ ಸ್ಥಾಪಿಸಿರುವ ಕೂಸಿನ ಮನೆ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳ ಪಾಲನೆ ಎಂಬುದು ತುಂಬಾ ಜವಾಬ್ದಾರಿಯುತ ಕೆಲಸವಾಗಿದ್ದು, ಇದನ್ನು ಪ್ರೀತಿ, ಶ್ರದ್ಧೆ ಮತ್ತು ವಾತ್ಸಲ್ಯದಿಂದ ನಿರ್ವಹಿಸಬೇಕು, ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಕೂಸಿನ ಮನೆ ಸಹಕಾರಿಯಾಗಿದೆ. ಇದು ಬಡವರಿಗೆ ವರದಾನವಾಗಿದೆ ಎಂದು ಹೇಳಿದರು.
ಪಿ.ಡಿ.ಒ. ಶಿವಪ್ಪ, ಗ್ರಾ.ಪಂ. ಸದಸ್ಯರು, ಸಿಬ್ಬಂದಿ, ಸಾರ್ವಜನಿಕರು ಇದ್ದರು.

One attachment • Scanned by Gmail