ಕೂಸಿನ ಮನೆ ಉದ್ಘಾಟನೆ

ಕಲಬುರಗಿ:ಜ.30:ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ಮಾದರಿ ಕೂಸಿನ ಮನೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ಸಂಪೂರ್ಣ ಶ್ರೀನಿವಾಸ ಬಣಕ್ಕಿ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು,ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ, ಪೆÇೀಷಣೆ ಮಾಡುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆಜಿ ಅವರು  'ಕೂಸಿನ ಮನೆ' (ಶಿಶು ಪಾಲನಾ ಕೇಂದ್ರ) ಎಂಬ ಮಹತ್ವದ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಅವರು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾಂಪಂ ಸದಸ್ಯರಾದ ಸುನೀಲ ಎಂ. ಅಮ್ಮಗೋಳ,ಇಸ್ಮಾಯಿಲ್ ನಿಗೇವಾನ,ರಾಜು ಬಿಚ್ಚಾ, ಮುಖಂಡರಾದ ಎಸ್ ಡಿ ಎಂ ಸಿ ಅಧ್ಯಕ್ಷ ಕಲ್ಯಾಣಿ ಹಡಪದ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತಿತರರು ಉಪಸ್ಥಿತರಿದ್ದರು.