
ಕಲಬುರಗಿ,ಏ.1-ರಾಜ್ಯ ಆಹಾರ ಸುರಕ್ಷಿತ ಮತ್ತು ಗುಣಮಟ್ಟ ಇಲಾಖೆಯ ಸ್ಕ್ವಾಡ್ ಡಾ.ಹರೀಶ್ವರ ಅವರು ನಗರದ ಬೀದಿ ಬದಿ ವ್ಯಾಪಾರಿಗಳು ಹಾಗೂ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವ್ಯಾಪಾರಿಗಳು ಸ್ವಚ್ಛತೆ ಕಾಪಾಡಬೇಕು ಹಾಗೂ ಕೃತಕ ಬಣ್ಣ ಬಳಸಬಾರದು. ಕೃತಕ ಬಣ್ಣ ಬಳಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನೂ ಟೊಮ್ಯಾಟೋ ಸಾಸ್ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅದರ ಆಹಾರ ಮಾದರಿ ಸಂಗ್ರಹಿಸಲು ಹಾಗೂ ಬೆಳಗಾವಿ ವಿಭಾಗದ ಪ್ರಯೋಗಾಲಯದ ವರದಿ ಆಧರಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು.
ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ. ಅರ್ಚನಾ ಕಮಲಾಪೂರಕರ್ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಇದ್ದರು.