ಕೃಷಿ ಇಲಾಖೆ ವಿವಿಧ ಯೋಜನೆ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ

ಚಿತ್ರದುರ್ಗ.ಮೇ.೨೬;ಕೃಷಿ ಇಲಾಖೆಯ 2022-23ನೇ ಸಾಲಿನ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನಗಳಿಸಿ, ಪುರಸ್ಕಾರ ಪಡೆದಿದೆ.
ಬೆಂಗಳೂರಿನಲ್ಲಿ ಜರುಗಿದ 2023-24ನೇ ಸಾಲಿನ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರದಲ್ಲಿ ಚಿತ್ರದುರ್ಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರಮೇಶ್ ಕುಮಾರ್ ಅವರು ಈ ಪುರಸ್ಕಾರ ಸ್ವೀಕರಿಸಿದರು.ಕೃಷಿ ಇಲಾಖೆ ಸಂಬಂಧದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ವರದಿಗಳ ಸಲ್ಲಿಕೆ, ಗುಣಮಟ್ಟ ನಿಯಂತ್ರಣ, ವಿಮಾ ಯೋಜನೆಗಳ ಅನುಷ್ಠಾನ, ಪಿ.ಎಂ.ಕಿಸಾನ್ ಸಮ್ಮಾನ್ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ಯೋಜನೆಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯಮಟ್ಟದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ.ಪುರಸ್ಕಾರವನ್ನು ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ ಅವರಿಂದ ಪುರಸ್ಕಾರ ವಿತರಿಸಲಾಯಿತು.