ಕೃಷಿ ಕಾಯಿದೆಗೆ ಸುಪ್ರೀಂ ತಡೆ

ನವದೆಹಲಿ, ಜ.೧೨- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮುಂದಿನ ಆದೇಶದವರೆಗೂ ಈ ಕಾಯ್ದೆಗಳನ್ನು ಅನುಷ್ಠಾನ ಮಾಡದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಸಮಸ್ಯೆ ಪರಿಹರಿಸಲು ೫ ಜನರ ಸಮಿತಿ ರಚಿಸಿ ರೈತರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸುವಂತೆ ಕೇಂದ್ರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ
ನೂತನ ಕೃಷಿ ಕಾಯ್ದೆಯ ಅನುಷ್ಠಾನ ಮತ್ತು ಜನವರಿ ೨೬ರಂದು ರೈತರು ದೆಹಲಿಗೆ ಟ್ರ್ಯಾಕ್ಟರ್ ಜಾಥಾ ಆಯೋಜಿಸಿರುವುದರಿಂದ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಎಸ್.ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ.
ಇದಕ್ಕೂ ಮುನ್ನ ವಿಚಾರಣೆ ಸಂದರ್ಭದಲ್ಲಿ ಕೃಷಿ ಕಾಯ್ದೆಗಳನ್ನು ಅನುಷ್ಠಾನ ಮಾಡದಂತೆ ತಾತ್ಕಾಲಿಕವಾಗಿ ತಡೆಹಿಡಿಯಬಹುದು ಆದರೆ ಅದು ಶಾಶ್ವತವಾಗಿ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ನೋಟೀಸ್ ಜಾರಿ:
ಜನವರಿ ೨೬ರಂದು ರೈತರು ದೆಹಲಿಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿ ಜನವರಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಉದ್ದೇಶಿಸಿರುವ ರೈತ ಸಂಘಟನೆಗಳ ನಾಯಕರಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ರೈತರು ಜನವರಿ ೨೬ ರಂದು ದೆಹಲಿಗೆ ಬಂದು ಎಲ್ಲಿಗೆ ಹೋಗುತ್ತಾರೆ ಹೀಗಾಗಿ ಅವರ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ಕೇಂದ್ರ ಸರ್ಕಾರದ ಉದ್ದೇಶಿತ ಸಮಿತಿಗೆ ರೈತರು ಸಹಕಾರ ನೀಡಬೇಕು ಎಂದು ಹೇಳಿದೆ.
ವರದಿ ಸಲ್ಲಿಸಲು ಸೂಚನೆ:
ರೈತರು ನಡೆಸುತ್ತಿರುವ ಹೋರಾಟದಲ್ಲಿ ಕಲಿಸುತ್ತಾನೆ ಸಂಘಟನೆಗಳು ಭಾಗಿಯಾಗಿವೆ ಎನ್ನುವ ಅಡ್ವೋಕೇಟ್ ಜನರಲ್ ವಾದದ ಹಿನ್ನೆಲೆಯಲ್ಲಿ ಈ ಸಂಬಂಧ ನಾಳೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ರೈತ ಹೋರಾಟ ದೊಂದಿಗೆ ಖಲಿಸುತ್ತಾನ್ ಸಂಘಟನೆಗಳು ಭಾಗಿಯಾಗಿವೆ .ಇದನ್ನು ಗುಪ್ತಚರ ಸಂಘಟನೆಗಳ ಮಾಹಿತಿ ಆದರಿಸಿ ಅಟಾರ್ನಿ ಜನರಲ್ ಮಾಹಿತಿ ನೀಡಿದ್ದರು.
ರೈತರ ಪರವಾಗಿ ವಾದ ಮಂಡಿಸಿದ ವಕೀಲರು ಕಳೆದ ೪೮ ದಿನಗಳಿಂದ ರೈತರು ಪ್ರತಿಭಟನೆ ನಡೆಸಿದರು ಒಂದು ಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರು ರೈತರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು