ಕೃಷಿ ಕಾಯ್ದೆಗೆ ಅವಕಾಶ ಕಲ್ಪಿಸಲು ರೈತರು‌‌ ಆಲೋಚಿಸಲಿ: ಎಚ್ ಡಿಕೆ

The Chief Minister of Karnataka, Shri H.D. Kumaraswamy meeting the Union Minister for Consumer Affairs, Food and Public Distribution, Shri Ram Vilas Paswan, in New Delhi on October 06, 2018.

ಬೆಂಗಳೂರು, ಡಿ 26- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗೆ ಅವಕಾಶ ನೀಡುವ ಬಗ್ಗೆ ರೈತರು ಒಂದು ಬಾರಿ ಆಲೋಚಿಸುವುದು ಸೂಕ್ತ ಎ‌ಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ದೇಶದ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪವಾಗಿದೆ. ಕೃಷಿಗೆ ಒಳ್ಳೆಯದದಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವು‌ ಸಿದ್ದರಾಗುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಾಯ್ದೆಗಳ ಬಗ್ಗೆ ಒಂದು ಬಾರಿ ಆಲೋಚಿಸುವುದು ಉಚಿತವಾಗಿದ್ದು ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.
ಕಾಯ್ದೆ ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಕೆನಡಾ ಪ್ರಧಾನಿ ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಅಮೆರಿಕ, ಬ್ರಿಟನ್ ಸಂಸದರು ಆತಂಕ‌ ವ್ಯಕ್ತಪಡಿಸಿದ್ದಾರೆ‌ ಎಂದು ಹೇಳಿದ್ದಾರೆ.
ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಮಾತುಗಳು ಭರವಸೆ ಮೂಡಿಸುವಂತಿದ್ದು, ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.