ಕೃಷಿ ಕಾಯ್ದೆ ಕುರಿತ ವರದಿ: ಮಾ.19 ರಂದು ಸಲ್ಲಿಕೆ

ನವದೆಹಲಿ, ಮಾ.31- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ರಚಿಸಲಾಗಿದ್ದ ಸಮಿತಿ ಮಾರ್ಚ್ 19ರಂದು ವರದಿ ಸಲ್ಲಿಸಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಹೆಸರು ಹೇಳಲಿಚ್ಚಿಸಿದ ಸದಸ್ಯರೊಬ್ಬರು ಈ ವಿಷಯ ತಿಳಿಸಿದ್ದಾರೆ.

85 ರೈತ ಸಂಘಟನೆಗಳ ನಾಯಕರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕಾಯ್ದೆಯ ಕುರಿತಂತೆ ಅಧ್ಯಯನ ಮಾಡಿ ಸಮಗ್ರ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಮೂವರು ಸದಸ್ಯರ ಸಮಿತಿಯನ್ನು ರಚನೆ ಮಾಡಿತ್ತು.

ರೈತರಿಗೆ ಮಾರಕವಾಗಲಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ ನಾಲ್ಕು ತಿಂಗಳಿಗೂ ಅಧಿಕ ಸಮಯದಿಂದ ದೆಹಲಿಯ ಗಡಿಭಾಗದಲ್ಲಿ ಪಂಜಾಬ್ ಹರಿಯಾಣ ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವ ವಿಷಯದಲ್ಲಿ ಹಟಮಾರಿತನ ಧೋರಣೆ ಪ್ರದರ್ಶಿಸುತ್ತಿದ್ದು ಇದು ಸಹಜವಾಗಿಯೇ ಕೆರಳಿಸಿದೆ