ಕೃಷಿ ಕಾಯ್ದೆ ವಾಪಸ್ ಪಡೆಯಿರಿ: ಕೋಡಿಹಳ್ಳಿ ಒತ್ತಾಯ

ಕಲಬುರಗಿ,ಜೂ 13: ಈ ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದಿರುವ ಕೃಷಿಕಾಯ್ದೆ ಕೂಡಲೆ ವಾಪಸ್ ಪಡೆಯಬೇಕೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಒತ್ತಾಯಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‍ಪಕ್ಷ ಅಧಿಕಾರಕ್ಕೆ ಬಂದರೆ ಕೃಷಿ ಕಾಯ್ದೆ ವಾಪಸ್ ಪಡೆಯುವುದಾಗಿ ಪ್ರಣಾಳಿಕೆಯಲ್ಲಿಘೋಷಣೆ ಮಾಡಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಸರಕಾರ ರಚಿಸಿರುವಹಿನ್ನೆಲೆಯಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಮೀನಮೇಷ ಎಣಿಸಬಾರದು ಎಂದು ಕಿವಿಮಾತು ಹೇಳಿದರು.
ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವುದಾಗಿ ಪಕ್ಷದ ಚುನಾವಣಾಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾಗ್ಯೂ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ. ಇದರಲ್ಲಿಪರಿಶೀಲಿಸುವುದು ಏನಿದೆ? ಈ ಹಿಂದೆ ಪ್ರತಿಪಕ್ಷದನಾಯಕರಾಗಿದ್ದಾಗ ಕಾಯ್ದೆಯನ್ನುವಿರೋಧಿಸಿದವರಿಗೆ ಅದನ್ನು ರದ್ದುಪಡಿಸುವುದರಲ್ಲಿ ತೊಂದರೆ ಏನಿದೆ? ಎಂದು ಕೋಡಿಹಳ್ಳಿ ಪ್ರಶ್ನಿಸಿದರು.
ಕೃಷಿ ಕಾಯ್ದೆ ವಾಪಸ್ ಪಡೆಯುವುದಕ್ಕೆ ಕೇವಲ ಕಾನೂನಾತ್ಮಕ ಘೋಷಣೆಯಅಗತ್ಯವಿದೆ. ಇದನ್ನು ಮಾಡಲು ಅನಗತ್ಯವಾಗಿ ಸಮಯ ತೆಗೆದುಕೊಳ್ಳಬಾರದು.ಈಗಾಗಲೇ ಎರಡು ಸಚಿವ ಸಂಪುಟ ಸಭೆಗಳಾಗಿವೆ. ಈ ಸಭೆಗಳಲ್ಲಿಯೇ ಕೃಷಿ ಕಾಯ್ದೆ ಹಿಂಪಡೆಯುವ ಕುರಿತು ನಿರ್ಧಾರ ಪ್ರಕಟಿಸಬಹುದಿತ್ತು. ಮುಂಬರುವ ಬಜೆಟ್‍ಅಧಿವೇಶದಲ್ಲಾದರೂ ಕೃಷಿ ಕಾಯ್ದೆ ರದ್ದುಪಡಿಸಬೇಕು. ಇದರಿಂದ ಸರಕಾರದ ಮೇಲೆ ಯಾವುದೇ ಆರ್ಥಿಕ ಹೊರೆ ಬೀಳುವುದಿಲ್ಲ ಎಂದರು. ಬಸನಗೌಡ, ಮಲ್ಲನಗೌಡ ಮತ್ತು ದೇವಕಿ ಉಪಸ್ಥಿತರಿದ್ದರು.


ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರಕಾರ ಜಾರಿಗೆ ತಂದ ಮೂರೂ ಕೃಷಿಕಾಯ್ದೆಗಳನ್ನು ಶಾಸನಬದ್ಧವಾಗಿ ರದ್ದು ಮಾಡಬೇಕು. ಇದರಿಂದ ರೈತರಿಗೆ ಹೆಚ್ಚು ಅನುಕೂಲ ಆಗಲಿದೆ.
-ಕೋಡಿಹಳ್ಳಿ ಚಂದ್ರಶೇಖರ
ರಾಜ್ಯಾಧ್ಯಕ್ಷರು, ರೈತಸಂಘ