ಕೃಷಿ ಕಾಯ್ದೆ ವಾಪಾಸ್ : ಸಂಭ್ರಮಾಚರಣೆ


ಶಿವಮೊಗ್ಗ, ನ. 20: ರೈತರ ಹೋರಾಟಕ್ಕೆ ಮಣಿದು, ವಿವಾದಿತ ಕೃಷಿ  ತಿದ್ದುಪಡಿ ಕಾಯ್ದೆಗಳನ್ನು ವಾಪಾಸ್ ಪಡೆದಿದ್ದಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ಸಂಘಟನೆಯು ಶನಿವಾರ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿತು.ಕೊನೆಗೂ ರೈತರ ಹೋರಾಟಕ್ಕೆ ಜಯ ಸಿಕ್ಕಿದೆ. ಸುದೀರ್ಘ ಹೋರಾಟದ ನಂತರ ಕೇಂದ್ರ ಸರ್ಕಾರ ಕಾಯ್ದೆಗಳನ್ನು ವಾಪಾಸ್ ಪಡೆದಿದೆ. ಮುಂದಿನ ದಿನಗಳಲ್ಲಿಯೂ ರೈತ ವಿರೋಧಿ ಕಾಯ್ದೆಗಳ ಜಾರಿಗೆ ಅವಕಾಶ ಕಲ್ಪಿಸುವುದಿಲ್ಲ ಎಂದು ಸಂಘಟನೆ ತಿಳಿಸಿದೆ. ಸಂಭ್ರಮಾಚರಣೆ ವೇಳೆ ರೈತ
ಸಂಘದ ಪ್ರಮುಖರು, ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರು ಉಪಸ್ಥಿತರಿದ್ದರು.