ಕೃಷಿ ಕಾಯ್ದೆ ಹಿಂದಕ್ಕೆ: ಕೃಷಿ ಸಚಿವಾಲಯ ನಿರ್ಧಾರ- ಜೋಷಿ

ನವದೆಹಲಿ, ನ.23- ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಅವರು ಈಗಾಗಲೇ ಪ್ರಕಟಿಸಿದ್ದು ಈ ಸಂಬಂಧ ಕೃಷಿ ಇಲಾಖೆ ಯಾವಾಗ ಸಂಸತ್ತಿನಲ್ಲಿ ತರಬೇಕು ಎನ್ನುವ ಬಗ್ಗೆ ನಿರ್ಧಾರ ಮಾಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಸಂಸತ್ನಲ್ಲಿ ಅಂಗೀಕಾರವಾಗಿರುವ ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ಅದನ್ನು ಅಧಿಕೃತವಾಗಿ ಪಡೆಯಬೇಕಾಗಿದೆ ಹೀಗಾಗಿ ಕೃಷಿ ಇಲಾಖೆ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಾರದಿಂದ ನಡೆಯಲಿರುವ ಸಂಸತ್ ಅಧಿವೇಶನದಲ್ಲಿ ಯಾವ ದಿನ ಸಂಸತ್ನಲ್ಲಿ ಮಂಡನೆಯಾಗಬೇಕು ಎನ್ನುವ ಕುರಿತು ಕೃಷಿ ಇಲಾಖೆ ನಿರ್ಧಾರ ಮಾಡಲಿದೆ ಆನಂತರ ಸಂಸತ್ತಿನ ಉಭಯ ಸದನಗಳಲ್ಲಿ ಆಗಲಿದೆ ಮಂಡನೆ ಆಗಲಿದೆ ಅವರು ತಿಳಿಸಿದರು.

ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಆದರೆ ಅದು ರೈತ ಸಮುದಾಯಕ್ಕೆ ಇಷ್ಟವಾಗಲಿಲ್ಲ ಎನ್ನುವ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಹಿಂದಕ್ಕೆ ಪಡೆದಿದ್ದಾರೆ ಎಂದು ಅವರು ತಿಳಿಸಿದರು.

ಸಂಸತ್ತಿನ ಉಭಯ ಸದನಗಳಲ್ಲಿ ಕೃಷಿ ಕಾಯ್ದೆಯನ್ನು ಮಂಡಿಸಿ ಅಧಿಕೃತವಾಗಿ ಹಿಂಪಡೆಯುವ ಪ್ರಕ್ರಿಯೆಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಸಂಸದ ಮನೀಶ್ ತಿವಾರಿ ಅವರ 26/11 ಕುರಿತು ನೀಡಿರುವ ಇದೇ ವೇಳೆ ಪ್ರಹ್ಲಾದ ಜೋಷಿ ತೀವ್ರವಾಗಿ ಖಂಡಿಸಿದರು.