ಕೃಷಿ ಕಾಯ್ದೆ ಹಿಂಪಡೆಯುವುದಿಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ,ಜ.4- ಕೃಷಿ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಆಹಾರ ಸಂಸ್ಕರಣಾ ಸಚಿವ ಪಿಯುಷ್ ಗೊಯಲ್, ಕೃಷಿ ಖಾತೆ ರಾಜ್ಯ ಸಚಿವ ಸೋಮ್ ಪ್ರಕಾಶ್ ನೇತೃತ್ವದಲ್ಲಿ ಇಂದು ನಡೆದ 7ನೇ ಸುತ್ತಿನ ರೈತ ಸಂಘಟನೆಗಳ ಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಕೃಷಿ ಕಾಯ್ದೆಯಲ್ಲಿ ಕೆಲ ಬದಲಾವಣೆಗಳನ್ನು ಬೇಕಾದರೆ ಮಾಡೋಣ ಆದರೆ ಯಾವುದೇ ಕಾರಣಕ್ಕೂ ಕಾಯ್ದೆಯನ್ನು ಹಿಂಪಡೆಯುವ ಪ್ರಶ್ನೆಯಿಲ್ಲ .ಕಾಯ್ದೆಗಳಿಂದ ರೈತರಿಗೆ ಅನುಕೂಲ ಎಂದು ರೈತ ನಾಯಕರಿಗೆ ಕೇಂದ್ರ ಸರ್ಕಾರ ತಿಳಿಸಿದೆ

ಕೃಷಿ ಕಾಯ್ದೆಯಲ್ಲಿರುವ ಪ್ರತಿಯೊಂದು ಅಂಶವನ್ನು ಬೇಕಾದರೆ ಚರ್ಚೆ ಮಾಡೋಣ ಆದರೆ ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಎಂ.ಎಸ್ ಪಿ ಖಾತರಿ:

ಕನಿಷ್ಠ ಬೆಂಬಲ ಬೆಲೆ ಯೋಜನೆ ಮುಂದುವರಿಯಲಿದೆ ಈ ಬಗ್ಗೆ ಆತಂಕ ಬೇಡ ಎಂದು ರೈತ ನಾಯಕರಿಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ.

ಹೋರಾಟ ತೀವ್ರ:

ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ 40 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಗಳಿವೆ.

ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರೈತರು ಮತ್ತು ರೈತ ಸಂಘಟನೆಗಳ ನಾಯಕರನ್ನು ಮತ್ತಷ್ಟು ಕೆರಳಿಸುವಂತೆ ಮಾಡಿದೆ.

ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಜನವರಿ 26ರಂದು ದೆಹಲಿ ಚಲೋ ನಡೆಸುವುದಾಗಿ ಹೇಳಿದ್ದ ರೈತರು ಇದೀಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದು ಸದ್ಯಕ್ಕಿರುವ ಕುತೂಹಲ