ಕೃಷಿ ಚಟುವಟಿಕೆ ಸಿದ್ದತೆ ಹಾಗೂ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಕಲಬುರಗಿ:ಮೇ.23:ಮುಂಗಾರು ಪೂರ್ವ ಮಳೆ ಹಾಗೂ ಕೃಷಿ ಚಟುವಟಿಕೆಗಳ ಸಿದ್ದತೆ ಕುರಿತು ಮುಖ್ಯಮಂತ್ರಿಗಳು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೋಗಗಳಿಂದ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡುವುದು, ರೈತರಿಗೆ ಗುಣಮಟ್ಟದ ಬೀಜಗಳು ಮತ್ತು ರಸಗೊಬ್ಬರಗಳನ್ನು ಪೂರೈಕೆ ಮಾಡುವುದು. ಹಾಗೂ ಈ ಹಿಂದೆ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದರು.
ನಮ್ಮ ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸಲಿದ್ದು, ಜನರ ಎಲ್ಲ ಆಶೋತ್ತರಗಳನ್ನು ಪೂರೈಸಲು ಸದಾ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡಲಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.